7ನೇ ವೇತನ ಆಯೋಗದ ಶಿಫಾರಸುಗಳ ಜಾರಿ, ಏರ್ ಇಂಡಿಯಾ ಖಾಸಗೀಕರಣಕ್ಕೆ ಕೇಂದ್ರ ಸಂಪುಟ ಒಪ್ಪಿಗೆ


ಹೊಸದಿಲ್ಲಿ: 7ನೇ ವೇತನ ಆಯೋಗದ ಶಿಫಾರಸುಗಳ ಜಾರಿ, ಏರ್ ಇಂಡಿಯಾ ಖಾಸಗೀರಕಣ ಸೇರಿ ಹಲವು ಮಹತ್ವದ ನಿರ್ಧಾರಗಳಿಗೆ ಕೇಂದ್ರ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ ಜೇಟ್ಲಿ ತಿಳಿಸಿದ್ದಾರೆ.

 ಹೊಸದಿಲ್ಲಿಯಲ್ಲಿ ಬುಧವಾರ ಸಂಜೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಈ ಮಾಹಿತಿ ಬಹಿರಂಗಪಡಿಸಿದ್ದಾರೆ.

 ಏರ್ ಇಂಡಿಯಾ ಸಂಸ್ಥೆಯಿಂದ ಬಂಡವಾಳ ಹಿಂದಕ್ಕೆ ಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಂತ ಹಂತವಾಗಿ ಏರ್ ಇಂಡಿಯಾದಿಂದ ಬಂಡವಾಳ ಹಿಂದಕ್ಕೆ ಪಡೆಯಲಾಗುವುದು ಎಂದು ಜೇಟ್ಲಿ ತಿಳಿಸಿದರು.

ಜು.1ರಿಂದ ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಹೆಚ್ಚಳವಾಗಲಿದೆ. ಇದರಿಂದ 50 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಉಪಯೋಗವಾಗಲಿದೆ. ಏರ್ ಇಂಡಿಯಾ ಖಾಸಗೀರಕಣ ಪ್ರಕ್ರಿಯೆಯೂ ಆರಂಭವಾಗಲಿದೆ ಎಂದು ಸಚಿವ ಜೇಟ್ಲಿ ತಿಳಿಸಿದ್ದಾರೆ.

Leave a Reply

Your email address will not be published.