ಪ್ರಜ್ಞೆ ತಪ್ಪಿ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾತನವೀಯತೆ ಮೆರೆದ ಶಾಸಕ ಸೋಮಶೇಖರ್


ಮೈಸೂರು: ಇಲ್ಲಿನ ಜೆಎಸ್ಎಸ್ ಆಸ್ಪತ್ರೆಯ ಮಾರ್ಗದ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಪ್ರಜ್ಞೆ ತಪ್ಪಿ ಬಿದ್ದದನ್ನು ಗಮನಿಸಿದ ಕೃಷ್ಣರಾಜ ಕ್ಷೇತ್ರದ ಶಾಸಕ ಎಮ್  ಸೋಮಶೇಖರ್ ಅವರು ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಶನಿವಾರ ತಡರಾತ್ರಿ ವ್ಯಕ್ತಿಯೊಬ್ಬ ರಸ್ತೆ ಬದಿ ಬಿದ್ದಿದ್ದ ಈ ವೇಳೆ ಶಾಸಕ ವಿದ್ಯಾರಣ್ಯಪುರಂನಲ್ಲಿ ಕರುಮಾರಿಯಮ್ಮನ ಕರಗ ಮಹೋತ್ಸವ  ಭಾಗಿಯಾಗಿ ವಾಪಸ್ಸಾಗುತ್ತಿರುವುವಾಗ ರಸ್ತೆ ಬದಿ ಬಿದ್ದಿದ್ದ ವ್ಯಕ್ತಿಯನ್ನು ಗಮನಿಸಿ ಕೂಡಲೇ ವ್ಯಕ್ತಿಯನ್ನು ತಮ್ಮ ಕಾರಿನಲ್ಲಿ ತೆಗೆದುಕೊಂಡು ಹೋಗಿ ಕೆ.ಆರ್. ಆಸ್ಪತ್ರೆಗೆ ಸೇರಿಸಿದ್ದಾರೆ. ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿ ಅಗ್ರಹಾಸ ನಿವಾಸಿ ಎಂದು ತಿಳಿದು ಬಂದಿದೆ.

Leave a Reply

Your email address will not be published.