ಖಾಸಗಿ ಬಸ್ ಕಾರು ಮುಖಾಮುಖಿ ಡಿಕ್ಕಿ: ಮೂವರು ಗಂಭೀರ ಗಾಯ


ಮೈಸೂರು:ಖಾಸಗಿ ಬಸ್ ಕಾರು ನಡುವೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ  ಗಾಯಗೊಂಡ ಘಟನೆ ತಿ.ನರಸೀಪುರ ಕಪಿಲಾ ಸೇತುವೆ ಮೇಲೆ ನಡೆದಿದೆ.

ಮಹದೇವಸ್ವಾಮಿ(38) ರತ್ನಮ್ಮ(43), ಹಾಗೂ ಬಾಲಕಿ ದಿಶಾ(8) ಅಪಘಾತದಲ್ಲಿ ಗಾಯಗೊಂಡವರು. ಮೈಸೂರಿನಿಂದ ಮಹದೇಶ್ವರ ಬೆಟ್ಟಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ  ಮೈಸೂರಿನತ್ತ ಸಾಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ತಿ.ನರಸೀಪುರ ಆಸ್ಪತ್ರೆಗೆ ಚಿಕಿತ್ಸೆಗೆ ಸೇರಿಸಲಾಗಿದೆ.

ಘಟನೆ ನಡೆದ ಬಳಿಕ  ಬಸ್ ಚಾಲಕ ಪರಾರಿಯಾಗಿದ್ದು, ಈ ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.