ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರ: ಶಾಸಕ ರಾಜಣ್ಣ

ಶಿಡ್ಲಘಟ್ಟದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಶಾಲಾ ವಿದ್ಯಾರ್ಥಿಗಳು ಉದ್ಘಾಟಿಸಿದರು.
ಶಿಡ್ಲಘಟ್ಟದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ಜನಪದ ಶೈಲಿಯ ನೃತ್ಯ ಜನರ ಗಮನಸೆಳೆಯಿತು.

ಶಿಡ್ಲಘಟ್ಟ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತೆಗೆಯಲು ಶಿಕ್ಷಕರ ಪಾತ್ರ ಪ್ರಮುಖವಾಗಿದ್ದು ಪೋಷಕರು ಸಹ ಸಹಕಾರ ನೀಡಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.

ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಒಂದೆಲ್ಲಾ ಒಂದು ರೀತಿಯ ಪ್ರತಿಭೆ ಅಡಗಿರುತ್ತದೆ ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಶಿಕ್ಷಕರು ಮತ್ತು ಪೋಷಕರು ಸಮನ್ವಯದಿಂದ ಮಾಡಬೇಕೆಂದು ಸಲಹೆ ನೀಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಕಾರ್ಯಕ್ರಮಗಳಿಗೆ ಸಂಪೂರ್ಣವಾಗಿ ಸಹಕಾರ ನೀಡುತ್ತೇನೆ ಎಂದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲ ಮುನಿರಾಜು ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಾಠ ಪ್ರವಚನಗಳಿಗೆ ಸೀಮಿತರಾಗದೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಶಾಲೆ, ಗ್ರಾಮ ಹಾಗೂ ತಾಲೂಕಿಗೆ ಕೀರ್ತಿ ತರುವಂತಹ ಕೆಲಸವನ್ನು ಮಾಡಬೇಕೆಂದು ಕಿವಿಮಾತು ಹೇಳಿದರು.

ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕೋಲಾಟ, ಖವಾಲಿ, ಸಂಗೀತ, ಕಂಠಪಾಠ, ಪ್ಲೇಮಾಡಲಿಂಗ್, ಚಿತ್ರಕಲೆ, ವೇಷಭೂಷಣಗಳು ಭಾಗವಹಿಸಿ ವಿದ್ಯರ್ಥಿಗಳು ಪ್ರತಿಭೆಯನ್ನು ಪ್ರದರ್ಶಿಸಿದರು.

ಬಿಇಓ ಚಂದ್ರಶೇಖರ್‍ಬಾಬು, ನಗರಸಭೆಯ ಅಧ್ಯಕ್ಷ ಬಿ.ಅಫ್ಸರ್‍ಪಾಷ,ಉಪಾಧ್ಯಕ್ಷೆ ಪ್ರಭಾವತಿ ಸುರೇಶ್,ನಗರಸಭಾ ಸದಸ್ಯ ಸಿಕಂದರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ವಿ.ಶ್ರೀರಾಮಯ್ಯ,ಕಸಾಪ ಅಧ್ಯಕ್ಷ ಕೆ.ಮಂಜುನಾಥ್, ವಚನ ಸಾಹಿತಿ ಪರಿಷತ್ತಿನ ಅಧ್ಯಕ್ಷ ನಾರಾಯಣಸ್ವಾಮಿ,ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬೈರಾರೆಡ್ಡಿ ಇತರರು ಇದ್ದರು.

 

Leave a Reply

Your email address will not be published.