ಶಿಡ್ಲಘಟ್ಟ: ಗೋಮಾಳ, ಸ್ಮಶಾನ ಜಾಗ ಒತ್ತುವರಿ ತೆರವು ಕಾರ್ಯಾಚರಣೆ


ಶಿಡ್ಲಘಟ್ಟ: ಒತ್ತುವರಿಯಾಗಿದ್ದ ಸರ್ಕಾರಿ ಗೋಮಾಳ ಸೇರಿದಂತೆ ಸ್ಮಶಾನದ ಜಾಗವನ್ನು ತಹಸೀಲ್ದಾರ್ ಎಸ್. ಅಜಿತ್‍ಕುಮಾರ್ ರೈ ನೇತೃತ್ವದ ಅಧಿಕಾರಿಗಳ ತಂಡ  ಮಂಗಳವಾರ ತೆರವುಗೊಳಿಸಿದರು.

ತಾಲೂಕಿನ ಬಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಂಟೂರು ಗ್ರಾಮದ ಸರ್ಕಾರಿ ಗೋಮಾಳ ಹಾಗೂ ಸ್ಮಶಾನದ ಜಾಗವನ್ನು ಗ್ರಾಮದ ಕೆಲವರು ಒತ್ತುವರಿ ಮಾಡಿಕೊಂಡಿದ್ದರು ಎನ್ನಲಾಗಿದ್ದು, ತಹಸೀಲ್ದಾರ್ ಎಸ್.ಅಜಿತ್‍ಕುಮಾರ್ ರೈ ನೇತೃತ್ವದ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ, ಸರ್ಕಾರಿ ಜಾಗದ ಅಳತೆ ಮಾಡಿಸುವ ಮೂಲಕ ಟ್ರಂಚ್ ಹೊಡೆದು ಗ್ರಾಮದ ಸ್ಮಶಾನಕ್ಕೆ ಮೀಸಲಿಟ್ಟಿದ್ದ ಜಾಗದ ಒತ್ತುವರಿಯನ್ನು ತೆರವುಗೊಳಿಸಿದ್ದಾರೆ.

ಸರ್ಕಾರಿ ಜಾಗ ಹಾಗೂ ರಸ್ತೆಯಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಕಟ್ಟಡಗಳನ್ನು ತಾವೇ ಖುದ್ದು ತೆರವುಗೊಳಿಸುವುದಾಗಿ ಸ್ಥಳೀಯರು ಮಾಡಿದ ಮನವಿಗೆ ಸ್ಪಂದಿಸಿ ಮುಂದಿನ ಗುರುವಾರದೊಳಗೆ ಒತ್ತುವರಿಯಾಗಿರುವ ಸರ್ಕಾರಿ ಜಾಗ ಹಾಗು ರಸ್ತೆಯ ಸ್ಥಳವನ್ನು ತೆರವುಗೊಳಿಸುವಂತೆ ಸೂಚಿಸಿದ್ದಾರೆ.

ಶೆಟ್ಟಹಳ್ಳಿ ರಾಜಸ್ವ ನಿರೀಕ್ಷಕ ನರಸಿಂಹಮೂರ್ತಿ, ಗ್ರಾಮ ಲೆಕ್ಕಿಗ ಮುನಿಶಾಮಿ, ರಮೇಶ್, ರಾಕೇಶ್, ಭೂಮಾಪನ ಇಲಾಖೆಯ ದಿಲೀಪ್, ದಿಬ್ಬೂರಹಳ್ಳಿ ಠಾಣೆಯ ಪಿಎಸ್ಸೈ ವಿಜಯ್‍ರೆಡ್ಡಿ, ಹಾಗೂ ಸಿಬ್ಬಂದಿ ಇತರರು ಇದ್ದರು.

 

Leave a Reply

Your email address will not be published.