ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ


ಚಳ್ಳಕೆರೆ:  ವಿಜಯಪುರ ಅಪ್ರಾಪ್ತ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಕಾಮುಕರನ್ನು ಗಲ್ಲು ಶಿಕ್ಷೆಗೆ ವಿಧಿಸಬೇಕು ಎಂದು ಒತ್ತಾಯಿಸಿ  ದಲಿತ ಪರ ಸಂಘಟನೆಗಳು, ಪ್ರಗತಿ ಪರ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಇತ್ತೀಚಿಗೆ ಮಹಿಳೆ ಮತ್ತು ಮಕ್ಕಳ ಮೇಲೆ ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ಕಡಿವಾಣ ಹಾಕಲು ಸರ್ಕಾರ ವಿಫಲಾಗಿದೆ. ವಿಜಯಪುರ ದಲ್ಲಿ  ವಿದ್ಯಾರ್ಥಿನಿ ದಾನೇಶ್ವರಿ ಮೇಲೆ ನಡೆದ ಅತ್ಯಚಾರ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು  ಎಂದು ಒತ್ತಾಯಿಸಿದರು.

 

ನೂರಾರು ಕಾರ್ಯಕರ್ತರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

Leave a Reply

Your email address will not be published.