ಧಾರವಾಡ: ರೈಲು ತಡೆಯಲು ಮುಂದಾದ ಕರವೇ ಕಾರ್ಯಕರ್ತರ ಬಂಧನ

 


ಧಾರವಾಡ: ಕಳಸಾ ಬಂಡೂರಿ ಹಾಗೂ ಮಹದಾಯಿ ಹೋರಾಟ ಧಾರವಾಡದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಂದ್ ನ ಭಾಗವಾಗಿ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಇಲ್ಲಿನ ರೈಲ್ವೆ ನಿಲ್ದಾಣಕ್ಕೆ ನುಗ್ಗಿ ರೈಲು ತಡೆ ನಡೆಸಲು ಮುಂದಾದ ವೇಳೆ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.

ನೂರಾರು ಕಾರ್ಯಕರ್ತರು ರೈಲ್ವೆ ನಿಲ್ದಾಣಕ್ಕೆ ನುಗ್ಗಲು ಪ್ರಯತ್ನಿಸಿದರು. ಆದರೆ, ಇದಕ್ಕೆ ಪೊಲೀಸರು ಅವಕಾಶ ಮಾಡಿಕೊಡಲಿಲ್ಲ. ಇದರಿಂದಾಗಿ ಕಾರ್ಯಕರ್ತರು ರೈಲ್ವೆ ತಡೆ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಕಾರ್ಯಕರ್ತರು ಪೊಲೀಸರೊಂದಿಗೆ ತೀವ್ರ ವಾಗ್ವಾದ ನಡೆಸಿದರು.ಪರಿಸ್ಥಿತಿ ಕೈಮೀರುತ್ತಿದ್ದಂತೆ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.

ಪೊಲೀಸರ ಈ ನಡೆಗೆ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯೆ ಪ್ರವೇಶಿಸಬೇಕು ಎಂದು ಆಗ್ರಹಿಸಿದರು.

Leave a Reply

Your email address will not be published.