ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಚಿತ ಲ್ಯಾಪ್‍ಟಾಪ್ ವಿತರಣೆ

ಪಾಂಡವಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಪರಿಶಿಷ್ಟಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಉಚಿತ ಲ್ಯಾಪ್ ಟಾಪ್ ವಿತರಿಸಿದರು.

ಪಾಂಡವಪುರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಸೋಮವಾರ ಸರ್ಕಾರದ ವತಿಯಿಂದ ಉಚಿತ ಲ್ಯಾಪ್‍ಟಾಪ್ ವಿತರಿಸಲಾಯಿತು.

ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಿದರು.
ನಂತರ ಮಾತನಾಡಿದ ಅವರು, ಕಂಪ್ಯೂಟರ್, ಮೊಬೈಲ್ ಬಂದ ನಂತರ ವಿದ್ಯಾರ್ಥಿಗಳಲ್ಲಿ ಬರವಣಿಗೆ ಕಡಿಮೆಯಾಗಿದೆ, ಬರವಣಿಗೆ ಮೂಲಕ ತಮ್ಮ ಮನದ ಇಂಗಿತವನ್ನು ವ್ಯಕ್ತಪಡಿಸುತ್ತಿದ್ದವರು ಈಗ ವಾಟ್ಸಾಪ್, ಕಂಪ್ಯೂಟರ್ ಮೂಲಕ ಕೃತಕವಾಗಿ ತಮ್ಮ ಮನಸ್ಸಿನ ಇಂಗಿತವನ್ನು ಹಂಚಿಕೊಳ್ಳುತ್ತಿದ್ದಾರೆ. ಅವಶ್ಯಕತೆಗೆ ಅನುಗುಣವಾಗಿ ತಂತ್ರಜ್ಞಾನ ಬಳಸಿಕೊಳ್ಳಬೇಕು ಎಂದರು. ಸರ್ಕಾರ ಶಿಕ್ಷಣಕ್ಕೆ ಅತ್ಯಂತ ಹೆಚ್ಚಿನ ಮಹತ್ವ ನೀಡುತ್ತಿದೆ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ.ಟಿ.ರಜನಿಕಾಂತ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ದ್ವಿತೀಯ ಪದವಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪರಿಶಿಷ್ಟ ಜಾತಿ ಮತ್ತು ಪಂಗಡದ 37 ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಲ್ಯಾಪ್‍ಟಾಪ್ ಪಡೆದ ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.
ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯ ಎ.ಎಲ್.ಕೆಂಪೂಗೌಡ, ಡಿ.ಕೆ.ದೇವೇಗೌಡ, ನಾಗರತ್ನ, ಬಿ.ಡಿ.ಚಂದ್ರಸೇಖರ್, ಎಚ್.ಪಿ.ಸತೀಶ್ ಕುಮಾರ್, ಎಚ್.ಗೊಪಾಲೇಗೌಡ, ಆರ್.ಪರಮೇಶ, ಉಮಾಶಂಕರ್, ಕೆ.ಆರ್.ಗುರುಮೂರ್ತಿ, ಪಿ.ಚಂದ್ರಶೇಖರ್, ಅರ್ಜುನ ಮುಂತಾದವರು ಇದ್ದರು.

Leave a Reply

Your email address will not be published.