ಚಳ್ಳಕೆರೆ: ಎಸ್ಟಿ ಮೀಸಲಾತಿ ಶೇ 7.5 ಗೆ ಹೆಚ್ಚಿಸಲು ಸಿ.ಟಿ. ರಾಘವೇಂದ್ರ ಆಗ್ರಹ


ಚಳ್ಳಕೆರೆ: ಕರ್ನಾಟಕ ರಾಜ್ಯದ ಎಲ್ಲ ಎಸ್ ಟಿ ಮೀಸಲು ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕೆಂದು ಕೆಪಿಸಿಸಿ ಎಸ್ ಟಿ ಘಟಕ ರಾಜ್ಯ ಕಾರ್ಯದರ್ಶಿ ಸಿ.ಟಿ. ರಾಘವೇಂದ್ರ ಹೇಳಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿವಿಧ ಜನಪರ ಯೋಜನಗೆಳನ್ನು ಜಾರಿಗೊಳಿಸಿದ್ದು, ವಿಶೇಷವಾಗಿ ನಾಯಕ ಜನಾಂಗಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವ ಮೂಲಕ ಮತ್ತೆ ಅಧಿಕಾರಕ್ಕೆ ತರಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಫೆಬ್ರುವರಿ ತಿಂಗಳಲ್ಲಿ ಕೆಪಿಸಿಸಿ ಎಸ್ ಟಿ  ಘಟಕದಿಂದ ಹೊಸಪೇಟೆಯಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಲಿದ್ದು, ಹಾಗಾಗೀ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾವಹಿಸುವಂತೆ ಕೋರಿದ್ದಾರೆ.

ವಾಲ್ಮೀಕಿ ನಾಯಕ ಜನಾಂಗ ಮೀಸಲಾತಿಯನ್ನು ಶೇ 7.5 ರಷ್ಟು ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ ಆಗ್ರಹಿಸಿದರು.

ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಅವರನ್ನು ಪಕ್ಷದ ಸಂಘಟನೆ ಮತ್ತು ಹಿತದೃಷ್ಠಿಯಿಂದ ಸೂಕ್ತ ಸ್ಥಾನಮಾನಕ್ಕಾಗಿ ಒತ್ತಾಯಿಸಿದರು.

ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕಗಳು ಹಿಂದುಳಿದ ಪ್ರದೇಶವಾಗಿದ್ದು, ಸರ್ಕಾರ ಕುಲಂಕುಶವಾಗಿ ಚರ್ಚಿಸಿ 371 ಜೆ ಕಲಂ ಗೆ ಸೇರಿಸಬೇಕು ಎಂದು ಒತ್ತಾಯಿಸಿದರು.

 

Leave a Reply

Your email address will not be published.