ವಿದ್ಯಾಕಾಶಿಯಲ್ಲಿ ಮತ್ತೆ ಹರಿದ ನೆತ್ತರು: ಆಟೋ ಚಾಲಕನ ಬರ್ಬರ ಹತ್ಯೆ


ಧಾರವಾಡ: ಧಾರವಾಡದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಇಲ್ಲಿನ ಕೋಳಿಕೆರೆ ಪಕ್ಕದಲ್ಲಿ ಆಟೊ ಚಾಲಕ ಈರಣ್ಣ ತಳವಾರ ಎಂಬಾತನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಈ ಕೊಲೆಗೆ ಕ್ಷುಲ್ಲಕ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದ್ದು, ಕೊಲೆ ಮಾಡಿದ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಇದೀಗ ಶಹರ ಠಾಣೆ ಪೊಲೀಸರು ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ. ಕೊಲೆ ಮಾಡಿದವರು ಯಾರು ಹಾಗೂ ಕೊಲೆಗೆ ಕಾರಣ ಏನು ಎಂಬುದು ಇನ್ನು ತಿಳಿದು ಬಂದಿಲ್ಲ.

Leave a Reply

Your email address will not be published.