ಜೇವರ್ಗಿಯಲ್ಲಿ 16 ರಿಂದ 18ರವರೆಗೆ ಕಮಲ ಜಾತ್ರೆ: ದೊಡ್ಡಪ್ಪಗೌಡ ಪಾಟೀಲ ನರಿಬೋಳ


ಕಲಬುರಗಿ: ಜಿಲ್ಲೆಯ ಜೇವರ್ಗಿ ಪಟ್ಟಣದ ಟೀಚರ್ಸ್ ಕಾಲನಿ ಬಳಿ ಇರುವ ವಿಶಾಲವಾದ ಪ್ರದೇಶದಲ್ಲಿ ಫೆ. 16 ರಿಂದ ಮೂರು ದಿನಗಳ ಕಾಲ ಕಮಲ ಜಾತ್ರೆ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಜಾತ್ರೆಯಲ್ಲಿ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯ ಹಾಲಿ ಶಾಸಕರು, ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಾತ್ರೆಯಲ್ಲಿ ವಸ್ತುಪ್ರದರ್ಶನ, ಕೇಂದ್ರ ಸರ್ಕಾರದ ಜನೋಪಯೋಗಿ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿಕೊಡಲಾಗುವುದು ತಿಳಿಸಿದರು.

ಯಡಿಯೂರಪ್ಪ ನೇತೃತ್ವದ ಹಿಂದಿನ ಸರ್ಕಾರದ ಸಾಧನೆ ಹಾಗೂ ಈಗಿನ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನತೆಗೆ ತಿಳಿಸುವುದು ಈ ಕಲಮ ಜಾತ್ರೆಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಸಂಗಣ್ಣ ಇಜೇರಿ, ಸಂಗಮೇಶ ನಾಗನಳ್ಳಿ ಇತರರು ಇದ್ದರು.

Leave a Reply

Your email address will not be published.