ದಾವಣಗೆರೆ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಕೆಂಚಪ್ಪ ಮೃತ ರೈತ

ದಾವಣಗೆರೆ: ಸಾಲ ಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಅಣ್ಣಾಪುರ ಗ್ರಾಮದಲ್ಲಿ ಇಂದು ನಡೆದಿದೆ.

ಕೆಂಚಪ್ಪ(52)  ಮೃತ ದುರ್ಧೈವಿ ರೈತ ಎಂದು ಗುರುತಿಸಲಾಗಿದೆ. ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಕೊಡಗನೂರು ಶಾಖೆಯಲ್ಲಿ ರೂ. 90 ಸಾವಿರ ಮತ್ತು 5 ಲಕ್ಷ ಕೈ ಸಾಲ ಮಾಡಿಕೊಂಡಿದ್ದಾನೆ.  ಎರಡು ಎಕರೆ ಜಮೀನಿನಲ್ಲಿ ಎರಡು ಕೊಳವೆ ಬಾಂವಿಗಳನ್ನು ಕೊರೆಸಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. 

ಮಾಯಕೊಂಡ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ  ಘಟನೆ ನಡೆದಿದೆ.

 

Leave a Reply

Your email address will not be published.