ಕಣ್ಣೂರು: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ


ಕಣ್ಣೂರು: ಅಪರಿಚಿತ ವ್ಯಕ್ತಿಗಳು ಯುವ ಕಾಂಗ್ರೆಸ್ ಕಾರ್ಯಕರ್ತರೊಬ್ಬರನ್ನು ಕೊಲೆ ಮಾಡಿದ ಘಟನೆ ಕೇರಳದ ಕಣ್ಣೂರಿನಲ್ಲಿ ನಿನ್ನೆ(ಫೆ.12) ರಾತ್ರಿ ನಡೆದಿದೆ.

ಕೊಲೆಗೀಡಾದವರನ್ನು ಯುವ ಕಾಂಗ್ರೆಸ್ ಮಟ್ಟನ್ನೂರು ಬ್ಲಾಕ್ ಕಾರ್ಯದರ್ಶಿ ಶುಹೈಬ್(30) ಎಂದು ಗುರುತಿಸಲಾಗಿದೆ. ಘಟನೆಯ ವೇಳೆ ಶುಹೈಬ್ ಜೊತೆಗಿದ್ದ ನಾಲ್ವರು ಗಾಯಗೊಂಡಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ಕಣ್ಣೂರಿನಲ್ಲಿ ಸ್ಥಳೀಯ  ಯೂತ್ ಕಾಂಗ್ರೆಸ್ ಮುಖಂಡ ಹಾಗೂ ಆತನ  ಸ್ನೇಹಿತರು ಮಾತನಾಡುತ್ತಿದ್ದಾಗ, ಅಲ್ಲಿಗೆ ಆಗಮಿಸಿದ ದುಷ್ಕರ್ಮಿಗಳು ಅವರತ್ತ ನಾಡಬಾಂಬ್ ಎಸೆದು ಬಳಿಕ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ  ವೇಳೆ 30 ವರ್ಷದ ಶುಹೈಬ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. 
  
ಅಲ್ಲಿ ಶುಹೈಬ್ ಗೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚುವರಿ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ರವಾನೆ ಮಾಡುವಾಗ ಶುಹೈಬ್ ಸಾವನ್ನಪ್ಪಿದ್ದಾನೆ.

ಕೃತ್ಯವನ್ನು  ಖಂಡಿಸಿ ಯು.ಡಿ.ಎಫ್. ಇಂದು ಕಣ್ಣೂರು ಜಿಲ್ಲೆಯಲ್ಲಿ ಹರತಾಳಕ್ಕೆ ಕರೆ ನೀಡಿದೆ.

ಸ್ಥಳದ್ಲಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

Leave a Reply

Your email address will not be published.