ಬೆಟಗೇರಿ ಗ್ರಾಮಕ್ಕೆ 2 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯ ಅರ್ಪಣೆ: ಶಾಸಕ ಬಾಲಚಂದ್ರ ಜಾರಕಿಹೊಳಿ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರವಿವಾರ ರಾತ್ರಿ ತಾಲೂಕಿನ ಬೇಟಗೇರಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರವಿವಾರ ರಾತ್ರಿ ತಾಲೂಕಿನ ಬೇಟಗೇರಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರವಿವಾರ ರಾತ್ರಿ ತಾಲೂಕಿನ ಬೇಟಗೇರಿ ಗ್ರಾಮದಲ್ಲಿ 1.55 ಕೋಟಿ ರೂಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಾ.ಆ.ಕೇಂದ್ರದ ಕಟ್ಟಡವನ್ನು ಉದ್ಘಾಟಿಸುತ್ತಿರುವುದು.

ಗೋಕಾಕ : ಬೆಟಗೇರಿ ಗ್ರಾಮದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಅರ್ಪಣೆ ಮಾಡಿರುವುದಾಗಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ರವಿವಾರ ರಾತ್ರಿ ಗ್ರಾಮ ಪಂಚಾಯತಿಯಿಂದ ನಡೆದ 2.02 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಭಾಗಕ್ಕೆ ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಅಭಿವೃದ್ಧಿಯ ಮೂಲಮಂತ್ರ ಎಂಬಂತೆ ಜನತೆಯ ಅಹವಾಲುಗಳಿಗೆ ಸ್ಪಂದಿಸಿರುವುದಾಗಿ ಹೇಳಿದರು.

ಗ್ರಾಮ ಪಂಚಾಯತಿ ಸಮೀತಿಯವರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳಲ್ಲಿ ಒಂದಾಗಿ-ಒಗ್ಗಟ್ಟಾಗಿ ಕೆಲಸ ಮಾಡುತ್ತಿರುವುದರಿಂದ ಗ್ರಾಮ ಅಭಿವೃದ್ಧಿಯತ್ತ ಸಾಗುತ್ತಿದೆ. ಮುಂದಿನ ದಿನಗಳಲ್ಲಿ ಗ್ರಾಮಸ್ಥರ ಬೇಡಿಕೆಗಳಿಗೆ ಹಂತ-ಹಂತವಾಗಿ ಸ್ಪಂದಿಸುವ ಭರವಸೆ ನೀಡಿದರು.

ನಮ್ಮ ಗ್ರಾಮ ನಮ್ಮ ಹೊಲ ಯೋಜನೆಯಡಿ ರಸ್ತೆಗಳನ್ನು ನಿರ್ಮಿಸಲಾಗುತ್ತಿದ್ದು, ಇದೇ ಫೆಬ್ರುವರಿ ತಿಂಗಳೊಳಗೆ ರಸ್ತೆ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಒಟ್ಟಿನಲ್ಲಿ ಬಾಕಿ ಉಳಿದಿರುವ ಬಹುತೇಕ ಕೆಲಸಗಳು ಚುನಾವಣೆಯೊಳಗೆ ಪೂರ್ಣಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಹನಿ ನೀರಾವರಿಗೆ ಒತ್ತುನೀಡಿ : ನೀರನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಹನಿ ನೀರಾವರಿಗೆ ರೈತರು ಹೆಚ್ಚಿನ ಆಧ್ಯತೆ ನೀಡಬೇಕು. ತಮ್ಮ ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸಿಕೊಳ್ಳುವ ಮೂಲಕ ನೀರನ್ನು ಸಹ ಮಿತವಾಗಿ ಬಳಕೆ ಮಾಡುವಂತೆ ರೈತ ಸಮೂಹಕ್ಕೆ ಕರೆ ನೀಡಿದರು. ಮುಂದಿನ ದಿನಗಳಲ್ಲಿ ರೈತರಲ್ಲಿ ಹನಿ ನೀರಾವರಿ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮುಂದಾಗುವುದಾಗಿ ಹೇಳಿದರು.

ಡಾ.ಕೃಷ್ಣಶರ್ಮ ಸ್ಮಾರಕ ಭವನ ನಿರ್ಮಾಣ: ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ಡಾ.ಬೆಟಗೇರಿ ಕೃಷ್ಣಶರ್ಮ ಅವರ ಸ್ಮರಣಾರ್ಥ ಸ್ಮಾರಕ ಭವನವನ್ನು ಗ್ರಾಮಸ್ಥರ ಆಶಯದಂತೆ ನಿರ್ಮಿಸಿಕೊಡಲಾಗುವುದು. ಈ ಮೂಲಕ ‘ಆನಂದ ಕಂದ’ನಿಗೆ ಗೌರವ ಅರ್ಪಿಸಲಾಗುವುದು ಎಂದು ಹೇಳಿದರು.

ವಿವಿಧ ಕಾಮಗಾರಿಗಳ ಅರ್ಪಣೆ : 1.55 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರ ನವೀಕರಣ ಹಾಗೂ ವಸತಿ ಗೃಹ, 25 ಲಕ್ಷ ರೂ. ವೆಚ್ಚದ ಎಸ್‍ಸಿಪಿ ಯೋಜನೆಯಡಿ ನಿರ್ಮಿಸಿದ ಸಮುದಾಯ ಭವನ, 5 ಲಕ್ಷ ರೂ. ವೆಚ್ಚದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಕೊಠಡಿ, 5 ಲಕ್ಷ ರೂ. ವೆಚ್ಚದ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಸಮುದಾಯ ಭವನವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಉದ್ಘಾಟಿಸಿದರು. 12 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುವ ಅಂಬೇಡ್ಕರ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.
ದಿವ್ಯ ಸಾನಿಧ್ಯವನ್ನು ಸುಣಧೋಳಿಯ ಶಿವಾನಂದ ಸ್ವಾಮಿಗಳು ವಹಿಸಿದ್ದರು.
ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷ ಪರಮಾನಂದ ಕೋಣಿ ವಹಿಸಿದ್ದರು.

ಧಾರವಾಡ ಕವಿವಿ ವ್ಯವಸ್ಥಾಪನ ಮಂಡಳಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ, ಜಿಪಂ ಸದಸ್ಯ ಗೋವಿಂದ ಕೊಪ್ಪದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಣ್ಣಾಸಾಹೇಬ ನರಟ್ಟಿ, ತಾಪಂ ಸದಸ್ಯ ಲಕ್ಷ್ಮಣ ನೀಲನ್ನವರ, ವಕೀಲ ಎಂ.ಐ. ನೀಲನ್ನವರ, ಈರಯ್ಯಾ ಹಿರೇಮಠ, ಸಂಗಯ್ಯಾ ಹಿರೇಮಠ, ಗ್ರಾಪಂ ಉಪಾಧ್ಯಕ್ಷೆ ಶೋಭಾ ದೇಯನ್ನವರ, ವೀರಸಂಗಪ್ಪ ದೇಯನ್ನವರ, ಈಶ್ವರ ಬಳಿಗಾರ, ಲಕ್ಷ್ಮಣ ಚಂದರಗಿ, ಸುಭಾಸ ಕರೆನ್ನವರ, ಸುಭಾಸ ಜಂಬಗಿ, ಅರ್ಜುನ ಅಂದಾನಿ, ಅಜ್ಜಪ್ಪ ಪೆದನ್ನವರ, ರಾಮಣ್ಣಾ ಬಳಿಗಾರ, ಕುತಬುದ್ದೀನ ಮಿರ್ಜಾನಾಯ್ಕ, ರಾಮಣ್ಣಾ ನೀಲನ್ನವರ, ಉದ್ದಪ್ಪ ಚಂದರಗಿ, ವಿಠ್ಠಲ ಕೋಣಿ, ಮಾರುತಿ ಚಂದರಗಿ, ತಾಲೂಕಾ ಆರೋಗ್ಯಾಧಿಕಾರಿ ಡಾ.ಆರ್.ಎಸ್. ಬೆಣಚಿನಮರಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಿಗಾರ, ಶಿವಲಿಂಗ ಬಳಿಗಾರ, ಪರುಶೆಟ್ಟಿ ಬಸು ಪಣದಿ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published.