ಪಾಂಡವಪುರ ಪದವಿ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಶಾಸಕ ಪುಟ್ಟಣ್ಣಯ್ಯ ಭೂಮಿಪೂಜೆ


ಪಾಂಡವಪುರ: ತಾಲೂಕಿನ ಮೇಲುಕೋಟೆ ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಸೋಮವಾರ ಭೂಮಿಪೂಜೆ ನೆರವೇರಿಸಿದರು.

ಅಂದಾಜು 3 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಕಾಲೇಜು ಕಟ್ಟಡ ಈ ಭಾಗದ ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯಾಗಿತ್ತು. ವಿದ್ಯಾರ್ಥಿಗಳು   ಪದವಿ ವ್ಯಾಸಂಗಕ್ಕಾಗಿ ಪಾಂಡವಪುರ, ಮಂಡ್ಯ, ಮೈಸೂರು ಅಥವಾ ಶ್ರೀರಂಗಪಟ್ಟಣಕ್ಕೆ ಹೋಗಬೇಕಾಗಿತ್ತು.  ನೂತನ ಕಾಲೇಜು ಕಟ್ಟಡ ನಿರ್ಮಾಣದಿಂದ ಮೇಲುಕೋಟೆ ಸುತ್ತಮುತ್ತಲಿನ 25ಕ್ಕೂ ಹೆಚ್ಚು ಗ್ರಾಮಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಗ್ರಾ.ಪಂ ಅಧ್ಯಕ್ಷ ನಾರಾಯಣ ಭಟ್ಟ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವೆಂಕಟರಮಣೇಗೌಡ, ಮುಖಂಡರಾದ ಅಮೃತಿ ರಾಜಶೇಖರ್, ಹೊಸಕೋಟೆ ವಿಜಯಕುಮಾರ್, ಪರಮೇಶ್ ಇತರರು ಇದ್ದರು.

Leave a Reply

Your email address will not be published.