ಬೆಳಗಾವಿ: ನಡು ರಸ್ತೆಯಲ್ಲಿಯೇ ಯುವತಿಗೆ ಕಿರುಕುಳ: ಮನನೊಂದು ಆತ್ಮಹತ್ಯೆಗೆ ಯತ್ನ


ಬೆಳಗಾವಿ: ರ್ಯಾಗಿಂಗ್ ನಿಂದ ಮನನೊಂದು ಪಿಯು ವಿದ್ಯಾರ್ಥಿನಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿ ತಾಲೂಕಿನ ಬೆಕ್ಕನಕೇರಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿಯ ಜ್ಯೋತಿ ಕಾಲೇಜಿನ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿನಿ  ಆತ್ಮಹತ್ಯೆಗೆ ಯತ್ನಿಸಿದವರು. ನಗರದ ಸಂಭಾಜಿ ವೃತ್ತದಲ್ಲಿ ಬೈಕ್ ಮೇಲೆ ಬಂದ ಕೆಲ ಕಿಡಿಗೇಡಿಗಳು ನಡು ರಸ್ತೆಯಲ್ಲಿಯೇ ವಿದ್ಯಾರ್ಥಿನಿಯ ಕೈ ಹಿಡಿದು ಎಳೆದಾಡಿದ್ದಾರೆ. ಅಲ್ಲದೇ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಘಟನೆಯಿಂದ ಮನನೊಂದ ವಿದ್ಯಾರ್ಥಿನಿ ಬೆಕ್ಕನಕೇರಿ ಗ್ರಾಮದ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತೀವ್ರ ಅಸ್ವಸ್ಥವಾಗಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯನ್ನು  ಗಂಭೀರವಾಗಿ ಪರಿಗಣಿಸಿದ ಖಡೇಬಜಾರ್ ಠಾಣೆ  ಪೊಲೀಸರು ಪ್ರಕರಣ ದಾಖಲಿಸಿಕೊಂಡು  ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published.