ಮೊಳಕಾಲ್ಮೂರಲ್ಲಿ ಶ್ರೀರಾಮುಲು ಭರ್ಜರಿ ಗೆಲವು: ಬದಾಮಿಯಲ್ಲಿ ಸೋಲಿನ ಭೀತಿ


ಚಿತ್ರದುರ್ಗ: ಹೈವೋಲ್ಟೇಜ್ ಕ್ಷೇತ್ರ ಎಂದೇ ಬಿಂಬಿತವಾಗಿರುವ ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಭರ್ಜರಿ ಗೆಲವು ಸಾಧಿಸಿದ್ದಾರೆ.

ಶ್ರೀರಾಮುಲು 25000 ಕ್ಕಿಂತ ಅಧಿಕ ಮತಗಳಿಂದ ಭರ್ಜರಿ ಗೆಲವು ಸಾಧಿಸಿ ಪ್ರತಿಸ್ಪರ್ಧಿ ತಿಪ್ಪೇಸ್ವಾಮಿಗೆ ಟಕ್ಕರ್ ನೀಡಿದ್ದಾರೆ. ಮೊಳಕಾಲ್ಮೂರು ಕ್ಷೇತ್ರದಿಂದ ಶ್ರೀರಾಮುಲು ಸ್ಪರ್ಧಿಸಲು ತೀರ್ಮಾನಿಸಿದಾಗ ತಿಪ್ಪೇಸ್ವಾಮಿ ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ಗೆಲವು ಸಾಧಿಸುತ್ತಿದ್ದಂತೆ ಅವರ ಬೆಂಬಲಿಗರು ಕುಣಿದು ಕುಪ್ಪಳಿಸುತ್ತಿದ್ದಾರೆ.

ಇತ್ತ ಬದಾಮಿ ಕ್ಷೇತ್ರದಲ್ಲಿ ಶ್ರೀರಾಮುಲುಗೆ ಸೋಲಿನ ಭೀತಿ ಎದುರಾಗಿದೆ.

Leave a Reply

Your email address will not be published.