11 ಶವಗಳ ಮಾನಸಿಕ ಮರಣೋತ್ತರ ಪರೀಕ್ಷೆಗೆ ಪೊಲೀಸರ ಪತ್ರ


ಹೊಸದಿಲ್ಲಿ : ಬುರಾರಿ ಪ್ರದೇಶದಲ್ಲಿ ಹನ್ನೊಂದು ಶವಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನಸಿಕ ಮರಣೋತ್ತರ ಪರೀಕ್ಷೆ ನಡೆಸಬೇಕೆಂದು ದೆಹಲಿ ಅಪರಾಧ ವಿಭಾಗದ ಪೊಲೀಸರು ಸಿಬಿಐ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಪತ್ರ ಬರೆದಿದ್ದಾರೆ.

ಏಳು ಮಹಿಳೆಯರು ಹಾಗೂ ನಾಲ್ಕು ಪುರುಷರ ಶವಗಳು ಜುಲೈ 1 ರಂದು ಬುರಾರಿ ಪ್ರದೇಶದ ಮನೆಯೊಂದರಲ್ಲಿ ಪತ್ತೆಯಾಗಿದ್ದವು.

ಎಲ್ಲ ಹನ್ನೊಂದು ಶವಗಳ ಮರಣೋತ್ತರ ಪರೀಕ್ಷಾ ವರದಿ ಬಂದಿದ್ದು , ಆತ್ಮಹತ್ಯೆ ಎಂದು ಗೊತ್ತಾಗಿರುವುದಾಗಿ ಜಂಟಿ ಆಯುಕ್ತ ಅಲೋಕ ಕುಮಾರ್ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 200 ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

Leave a Reply

Your email address will not be published.