ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದ ಕಾರು ಸುಟ್ಟು ಭಸ್ಮ


ಧಾರವಾಡ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು ಸುಟ್ಟು ಕರಕಲಾದ ಘಟನೆ ಭಾನುವಾರ ನಡೆದಿದೆ.  

ಧಾರವಾಡದಿಂದ ಬೆಳಗಾವಿ ಕಡೆಗೆ ಹೊರಟಿದ್ದ ಕಾರು, ಧಾರವಾಡ ತಾಲೂಕಿನ ಕೋಟೂರ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.