ಬೆಂಗಳೂರು: ದೋಸ್ತಿ ಸರಕಾರದ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಹೇಳಿದ್ದಾರೆ.
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆಗೆ ಒತ್ತಾಯಿಸಿ ಬಂದ್ ಕರೆ ಬೆನ್ನಲ್ಲೇ ಗುಂಡೂರಾವ್ ಈ ಹೇಳಿಕೆ ನೀಡಿದ್ದು, ಉತ್ತರ ಕರ್ನಾಟಕಕ್ಕೆ ದೋಸ್ತಿ ಸರಕಾರದಿಂದ ಅನ್ಯಾಯವಾಗಿಲ್ಲ ಎಂದು ಸಮಜಾಯಷಿಯನ್ನೂ ಕೊಟ್ಟಿದ್ದಾರೆ.
ಡಿಸಿಎಂ ಪರಮೇಶ್ವರ, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸಚಿವ ಡಿಕೆಶಿ ಹಾಗೂ ತಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವೆಲ್ಲ ಒಂದಾಗಿದ್ದೇವೆ ಎಂದು ಅವರು ಹೇಳಿದರು.