ಇಮ್ರಾನ ಖಾನ್ ಪಾಕ್ ಮುಂದಿನ ಪ್ರಧಾನಿ


ಇಸ್ಲಾಮಾಬಾದ್ (ಪಾಕಿಸ್ತಾನ): ಪಾಕಿಸ್ತಾನ ತೆಹರೀಕ್ ಇ ಇನ್ಸಾಫ್ (ಪಿಟಿಐ) ಮುಖ್ಯಸ್ಥ, ಮಾಜಿ ಕ್ರಿಕೆಟಿಗ  ಇಮ್ರಾನ್ ಖಾನ್ ಪಾಕಿಸ್ತಾನದ ನೂತನ ಪ್ರಧಾನಿಯಾಗುವುದು ಖಚಿತವಾಗುತ್ತಿದ್ದಂತೆಯೇ ಇಸ್ಲಾಮಾಬಾದ್ ಆಡಳಿತ ಯಂತ್ರವು ಅವರಿಗೆ ಎಲ್ಲ ಸೌಕರ್ಯಗಳನ್ನು ಒದಗಿಸಲು ಆರಂಭಿಸಿದೆ.

ಖಾನ್ ಅವರ ಬನಿ ಗಲಾ ನಿವಾಸದ ಬಳಿ  ಖಾಸಗಿ ರಕ್ಷಣಾ ಸಿಬ್ಬಂದಿಯ ಸ್ಥಳದಲ್ಲಿ ಈಗಾಗಲೇ 30 ಜನ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಸಮಾ ಟಿವಿ ವರದಿ ಮಾಡಿದೆ.

ಇಸ್ಲಾಮಾಬಾದ್ 2 ನೇ ಕ್ಷೇತ್ರದಲ್ಲಿ ಇಮ್ರಾನ್ ಖಾನ್ ಪಾಕಿಸ್ತಾನ ಮುಸ್ಲಿಂ ಲೀಗ್ (ನವಾಜ್) ಅಭ್ಯರ್ಥಿ ಶಾಹಿದ್ ಖಾಕನ್ ಅಬ್ಬಾಸಿ ಅವರ ವಿರುದ್ಧ 92891 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಗೆಲುವಿನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಇಮ್ರಾನ್ ಖಾನ್, ಪಾಕಿಸ್ತಾನದ ಜನತೆಯ ಆಶೋತ್ತರಗಳಿಗೆ ತಕ್ಕಂತೆ ಕೆಲಸ ಮಾಡುವುದಾಗಿ ಹೇಳಿದರು.

ಬಡವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿಯೂ ಅವರು ಭರವಸೆ ನೀಡಿದರು.

Leave a Reply

Your email address will not be published.