ಮಧುಗಿರಿ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಲ್ಲಿಕಾರ್ಜುನಯ್ಯ ಅವಿರೋಧವಾಗಿ ಆಯ್ಕೆ


ಮಧುಗಿರಿ: ಪ್ರೌಢಶಾಲಾ ಸಹಶಿಕ್ಷಕರ ಸಂಘ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ಕ್ರಿಯಾತ್ಮಕವಾಗಿ ಕಾರ್ಯ ನಿರ್ವಹಿಸುವುದಾಗಿ ನೂತನ ಪ್ರೌಢಶಾಲಾ ಸಹಶಿಕ್ಷಕರ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ತಿಳಿಸಿದರು.

ಪಟ್ಟಣದ ಡಿಡಿಪಿಐ ಕಚೇರಿಯ ಸಮೀಪದ ಶಿಕ್ಷಕರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಬಳಿಕ ಪದಾಧಿಕಾರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿ ಮಾತನಾಡಿದ ಅವರು, ಈ ಹಿಂದೆ ಅಧ್ಯಕ್ಷರಾಗಿದ್ದ ಎಂ.ಶಿವಲಿಂಗಪ್ಪನವರು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಹಾಗೂ ಪದಾಧಿಕಾರಿಗಳ ಮಾರ್ಗದರ್ಶನ ಹಾಗೂ ಸಹಕಾರದಿಂದ ಕಚೇರಿಯಲ್ಲಿನ ಶಿಕ್ಷಕರ ಕಾರ್ಯಗಳು ತ್ವರಿತ ಗತಿಯಲ್ಲಿ ಆಗುವಂತೆ ನೋಡಿಕೊಂಡು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದರು.

ಅಧ್ಯಕ್ಷರ ಆಯ್ಕೆಯ ನೇತೃತ್ವವನ್ನು ಸಹಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಎಂ.ವೆಂಕಟರಾಮು ವಹಿಸಿದ್ದರು, ಇದೇ ಸಂದರ್ಭದಲ್ಲಿ ಪಾವಗಡ ತಾಲ್ಲೂಕು ಘಟಕದ ಯತಿಕುಮಾರ್, ಶಿರಾ ಘಟಕದ ನಾಗಭೂಷಣ್, ಮುಖ್ಯಶಿಕ್ಷಕ ಸಂಘದ ಜಿಲ್ಲಾ ಕಾರ್ಯದರ್ಶಿ ಹೆಚ್.ಶಿವಕುಮಾರ್, ನಿಕಟ ಪೂರ್ವ ಅಧ್ಯಕ್ಷ ಎಂ.ಶಿವಲಿಂಗಪ್ಪ, ತಾಲ್ಲೂಕು ಕಾರ್ಯದರ್ಶಿ ರಂಗಧಾಮಯ್ಯ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published.