ಬೈಕ್ ಗೆ ಕಾರು ಡಿಕ್ಕಿ: ಒಬ್ಬ ಸಾವು, ಇಬ್ಬರಿಗೆ ಗಾಯ


ಬೀದರ: ಸ್ಥಳೀಯ ಸಂಸ್ಥೆಗಳಿಗೆ ಶುಕ್ರವಾರ ನಡೆಯುತ್ತಿರುವ ಚುನಾವಣೆಯಲ್ಲಿ ಮತ ಚಲಾಯಿಸಿ ಬೈಕ್ ನಲ್ಲಿ ವಾಪಸ್ಸಾಗುತ್ತಿದ್ದ ಯುವಕನೊಬ್ಬ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ.

ಮೃತ ಯುವಕನನ್ನು ಮೊಹ್ಮದ ಹಾಜಿ ಜಮ್ಖಾನಿ (22) ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ.

ಹುಮನಾಬಾದ ತಾಲೂಕಿನ ಹಳ್ಳಿಖೇಡ್ ಕ್ರಾಸ್ ಬಳಿ ಈ ದುರಂತ ಸಂಭವಿಸಿದ್ದು, ಹಳ್ಳಿಖೇಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published.