ಅಕ್ರಮ ಮದ್ಯ ಮಾರಾಟಕ್ಕೆ ಕುಮ್ಮಕ್ಕು: ಗ್ರಾಮಸ್ಥರಿಗೆ ಹೆದರಿ ಅಬಕಾರಿ ಅಧಿಕಾರಿಗಳು ಪರಾರಿ


ಅಥಣಿ: ಅಕ್ರಮ ಮದ್ಯ ಮಾರಾಟ ತಡೆಗಟ್ಟ ಬೇಕಾದ ಅಬಕಾರಿ ಇಲಾಖೆ ಅಧಿಕಾರಿಗಳೇ ಮದ್ಯ ಮಾರಾಟಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ಅಥಣಿ ತಾಲೂಕಿನ ಹಾಲಳ್ಳಿ ಗ್ರಾಮದಲ್ಲಿ ಅಧಿಕಾರಿಗಳ ಕುಮ್ಮಕ್ಕಿನಿಂದಲೇ ಕೆಲವರು ಅಕ್ರಮ  ಮದ್ಯ ಮಾರಾಟಕ್ಕಿಳಿದ್ದಾರೆ ಎನ್ನಲಾಗಿದ್ದು,  ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳನ್ನು ಗ್ರಾಮಸ್ಥರು ತರಾಟೆಗೆ ತಗೆದುಕೊಂಡ ಪ್ರಸಂಗ ನಡೆದಿದೆ.

ಮಹಿಳೆಯರು ಅಧಿಕಾರಿಗಳನ್ನು ಮುತ್ತಿಗೆ ಹಾಕಿ ನಿಮಗೆ ಹಪ್ತಾ ಬೇಕಿದ್ದರೆ ಹೇಳಿ ನಾವೇ ಎಲ್ಲರು ಸೇರಿ ಹಣ ಸಂದಾಯ ಮಾಡುತ್ತೇವೆ. ಮೊದಲು ಗ್ರಾಮದಲ್ಲಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಿ ಎಂದು ತರಾಟೆಗೆ ತಗೆದುಕೊಂಡಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಅಬಕಾರಿ ಕಚೇರಿ ಎದುರೇ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಗ್ರಮಸ್ಥರು ತರಾಟೆಗೆ ತಗೆದುಕೊಳ್ಳುತ್ತಿದ್ದಂತೆ ಅಬಕಾರಿ ಅಧಿಕಾರಿಗಳು ಪರಾರಿಯಾಗಿದ್ದಾರೆ.

Leave a Reply

Your email address will not be published.