14 ರಂದು ಡಿಎಂಕೆ ಕಾರ್ಯಕಾರಿಣಿ ಸಭೆ


ಚೆನ್ನೈ (ತಮಿಳುನಾಡು): ದ್ರಾವಿಡ ಮುನ್ನೇತ್ರ ಕಜಗಂ (ಡಿಎಂಕೆ) ಅಧ್ಯಕ್ಷ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ನಿಧನದ ನಂತರ ಇದೀಗ ಆ.  14 ರಂದು ಪಕ್ಷದ ಕಾರ್ಯಕಾರಿ ಸಮಿತಿ ಕರೆಯಲಾಗಿದೆ.

ಚೆನ್ನೈನ ಅಣ್ಣಾ ಅರಿವಾಲಯಂನಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ. ಸಭೆಯ ಕುರಿತಂತೆ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ. ಅಂಬಾಲಗನ್ ಪ್ರಕಟಣೆ ಹೊರಡಿಸಿದ್ದಾರೆ.

ಕರುಣಾನಿಧಿ ನಿಧನಹೊಂದಿದ ಮೇಲೆ ಇದೇ ಮೊದಲ ಬಾರಿ ಪಕ್ಷದ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ.  ಕಾರ್ಯಕಾರಿಣಿಯ ಎಲ್ಲ ಸದಸ್ಯರಿಗೂ ಸಭೆಯಲ್ಲಿ ಹಾಜರಿರುವಂತೆ ಸೂಚಿಸಲಾಗಿದೆ.

ಕರುಣಾನಿಧಿ ಸಾವು ಹಾಗೂ ಇತರೆ ವಿಷಯಗಳ ಮೇಲೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಕರುಣಾನಿಧಿ ಅವರ ಕಿರಿಯ ಪುತ್ರ ಎಂ.ಕೆ. ಸ್ಟಾಲಿನ್ ಅವರನ್ನು ಪಕ್ಷದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತದೆ ಎಂಬ ವದಂತಿ ದಟ್ಟವಾಗಿದೆ. ಸದ್ಯ ಸ್ಟಾಲಿನ್ ಪಕ್ಷದ ಕಾರ್ಯಾಧ್ಯಕ್ಷರಾಗಿದ್ದಾರೆ.

Leave a Reply

Your email address will not be published.