ಗೋಡೆ ಕುಸಿದು ಬಿದ್ದು ಇಬ್ಬರು ಯುವತಿಯರ ಸಾವು


ಧಾರವಾಡ: ನಿರಂತರವಾಗಿ ಸುರಿದ ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದು ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಅಳ್ನಾವರ ಪಟ್ಟಣದಲ್ಲಿ ಗುರುವಾರ ನಡೆದಿದೆ.

ಶಶಿಕಲಾ (20) ಎಂಬುವವರು ಸ್ಥಳದಲ್ಲೇ ಮೃತಪಟ್ಟರೆ, ಮುಕ್ತಾ (18) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಮುಕ್ತಾ ಮೃತಪಟ್ಟಿದ್ದಾಳೆ.

ಪ್ರಕಾಶ್ ಸುರೋಜಿ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಅತಿಯಾದ ಮಳೆಯಿಂದಾಗಿ ಶಿಥಿಲಗೊಂಡಿದ್ದ ಗೋಡೆ ಕುಸಿದು ಬಿದ್ದಿದೆ. ಈ ಸಂಬಂಧ ಅಳ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published.