ಸೂರ್ಯಕಾಂತಿ ಬೆಳೆ ಜಮೀನಿನಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋದ ತಾಯಿ


ಮುದ್ದೇಬಿಹಾಳ:  ಮಾನಸಿಕ ಅಸ್ವಸ್ಥೆಯೊಬ್ಬಳು ಸೂರ್ಯಕಾಂತಿ ಜಮೀನಿನಲ್ಲಿ ಮಗುವಿಗೆ ಜನ್ಮ ನೀಡಿ.  ಮಗುವನ್ನು ಅಲ್ಲಿಯೇ ಬಿಟ್ಟು ಬಂದ  ಘಟನೆ ಮುದ್ದೇಬಿಹಾಳ ಪಟ್ಟಣದಲ್ಲಿ  ನಡೆದಿದ್ದು, ಮಕ್ಕಳ ರಕ್ಷಣಾ ಅಧಿಕಾರಿಗಳ ಸಮಯಪ್ರಜ್ಞೆಯಿಂದ ನವಜಾತ ಶಿಶುವನ್ನು ರಕ್ಷಿಸಿಲಾಗಿದೆ.

ಮಕ್ಕಳ ರಕ್ಷಣಾ ಅಧಿಕಾರಿಗಳು ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ್ದು, ಮಹಿಳೆಯನ್ನು ವಿಚಾರಣೆ ನಡೆಸಿದ್ದಾಗ ಮಗುವನ್ನು ಬಿಟ್ಟು ಬಂದಿರುವುದಾಗಿ ಹೇಳಿದ್ದಾಳೆ.  ಅಧಿಕಾರಿಗಳು, ಸ್ಥಳೀಯರು ಜಮೀನಿನಲ್ಲಿ ಹುಡುಕಾಟ ನಡೆಸಿದಾಗ ಅರೆಪ್ರಜ್ಞಾವಸ್ತೆಯಲ್ಲಿ ನವಜಾತ ಶಿಶು ದೊರೆತಿದೆ.

ಸದ್ಯ ಮಗುವನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಿರ್ಮಲಾ ಸುರಪೂರ ಉದನಾಡು ಇ ಪತ್ರಿಕೆಯೊಂದಿಗೆ ಮಾತನಾಡಿ, ಮಹಿಳೆ ಮಾನಸಿಕ ಅಸ್ವಸ್ಥೆ ಇದಾಳೆ ಅಂತಾ ಗ್ರಾಮಸ್ಥರು ಹೇಳುತ್ತಿದ್ದಾರೆ. ಜನಿಸಿರುವ ಮಗು 2.3 ಕೆಜಿ ಇದೆ. ಮಗು ಮಗು ಗುಣಮುಖವಾದ ನಂತರ  ಪಾಲಕರ ವಶಕ್ಕೆ ಒಪ್ಪಿಸುವುದೋ ಅಥವಾ ರಕ್ಷಣಾ ಘಟಕದ ಆಶ್ರಯದಲ್ಲಿರುವುದೋ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

Leave a Reply

Your email address will not be published.