ರಾಯಬಾಗ: ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

ಸಾಂದರ್ಭಿಕ ಚಿತ್ರ

ರಾಯಬಾಗ: ಕಸಾಯಿ ಖಾನೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 13 ಕ್ಕೂ ಹೆಚ್ಚು ಜಾನುವಾರುಗಳನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.

ಚಿಕ್ಕೋಡಿ ತಾಲೂಕಿನಿ ವಡ್ರಾಳ ಗ್ರಾಮದಿಂದ ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮದ ಮೂಲಕ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಬಾವನಸೌದತ್ತಿ ಗ್ರಾಮಸ್ಥರು ಸಂಶಯಗೊಂಡು ವಾಹನ ಅಡ್ಡಗಟ್ಟಿ ನೋಡಿದಾಗ ಜಾನುವಾರುಗಳನ್ನು ಸಾಗಿಸುತ್ತಿರುವುದು ಕಂಡು ಬಂದಿದೆ.

ಗ್ರಾಮಸ್ಥರು ಹಲ್ಲೆ ಮಾಡುತ್ತಾರೆ ಎಂಬ ಭಯದಿಂದ ಚಾಲಕರು ವಾಹನ ಬಿಟ್ಟು ಪರಾರಿಯಾಗಿದ್ದಾರೆ.

ರಾಯಬಾಗ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Leave a Reply

Your email address will not be published.