ಸಿಬಿಎಸ್ ಇ ಟಾಪರ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ!


ಚಂಡೀಗಢ: ಸಿಬಿಎಸ್ ಇ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ 19 ವರ್ಷದ ಯುವತಿ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹರಿಯಾಣದ ಮಹೇಂದ್ರಗಡ್ ದ ಕನಿನಾದಲ್ಲಿ ನಡೆದಿದ್ದು, ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಂತ್ತಸ್ತ ಯುವತಿ ಇತ್ತೀಚಿಗೆ 12 ತರಗತಿ ಸಿಬಿಎಸ್ ಇ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಳು.  ಬುಧವಾರ ಟ್ಯೂಷನ್ ಗೆ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ಮೂವರು ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಬಸ್ ನಿಲ್ದಾಣ ಒಂದರ ಬಳಿ ಆಕೆಯನ್ನು ಎಸೆದು ಪರಾರಿಯಾಗಿದ್ದಾರೆ.

ರೇವಾರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳಿಗಾಗಿ ಪೋಲಿಸರು ಬಲೆ ಬೀಸಿದ್ದಾರೆ.

Leave a Reply

Your email address will not be published.