ನಾಳೆ ಸುವರ್ಣಸೌಧದಲ್ಲಿ ಮಠಾಧೀಶರಿಂದ ಸಿಎಂ ಎಚ್ಡಿಕೆಗೆ ಸನ್ಮಾನ


ಬೆಳಗಾವಿ: ಉತ್ತರ ಕರ್ನಾಟಕ ವಿವಿಧ ಮಠಾಧೀಶರ ಹೋರಾಟಕ್ಕೆ ಸ್ಪಂಧಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸುವರ್ಣ ವಿಧಾನಸೌಧಕ್ಕೆ 9 ಸರಕಾರಿ ಕಚೇರಿ ಸ್ಥಳಾಂತರಿಸುವ ನಿರ್ಣಯ ತೆಗೆದುಕೊಂಡ ಹಿನ್ನೆಲೆ ನಾಳೆ ಸುವರ್ಣ ಸೌಧದಲ್ಲಿ  ಈ ಭಾಗದ ಮಠಾಧೀಶರು ಸಿಎಂ ಕುಮಾರಸ್ವಾಮಿ ಅವರನ್ನು ಅಭಿನಂದಿಸಿ ಗೌರವಿಸಲಿದ್ದಾರೆ.

ಅಭಿವೃದ್ದಿಯಿಂದ ವಂಚಿತವಾದ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ದಿ ಮಾಡುವಂತೆ ಒತ್ತಾಯಿಸಿ ಆ.31 ರಂದು ಉತ್ತರ ಕರ್ನಾಟಕದ ವಿವಿಧ ಮಠಾಧೀಶರು ಹೋರಾಟ ನಡೆಸಿದ ಫಲವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 9 ಸರಕಾರಿ ಕಚೇರಿ ಸ್ಥಳಾಂತರ ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ.

ಸುವರ್ಣ ವಿಧಾನಸೌಧದಲ್ಲಿ ನಡೆಸಲಿರುವ ಜನತಾ ದರ್ಶನದಲ್ಲಿ ಮಧ್ಯಾಹ್ನ 2 ಗಂಟೆಗೆ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ನಿಡಸೋಸಿಯ ಶ್ರೀ ಪಂಚಮಶಿವಲಿಂಗೇಶ್ವರ ಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠದ ಶ್ರೀ ಸಿದ್ದರಾಮ ಸ್ವಾಮೀಜಿ, ಕಾರಂಜಿಮಠದ ಶ್ರೀ ಗುರುಸಿದ್ದ ಸ್ವಾಮೀಜಿ, ಬಾಗಲಕೋಟೆಯ ಸಿದ್ದಾರೋಢ ಮಠದ ಸ್ವಾಮೀಜಿ ಸೇರಿದಂತೆ ಅನೇಕ ಸ್ವಾಮೀಜಿಗಳು ಸಿಎಂ ಅವರನ್ನು ಸನ್ಮಾನಿಸಲಿದ್ದಾರೆ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

 

Leave a Reply

Your email address will not be published.