ಸಂಪುಟ ವಿಸ್ತರಣೆ ಒಂದು ತಿಂಗಳು ಮುಂದಕ್ಕೆ??


ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರಕಾರದ ಎರಡನೇ ಹಂತದ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿ ಬರಲು ಇನ್ನೂ ಒಂದು ತಿಂಗಳು ಕಾಯಬೇಕಾ?

ಹೌದು ಎನ್ನುತ್ತಿವೆ ಮೂಲಗಳು ! ಅಕ್ಟೋಬರ್ 15 ರಿಂದ 20 ರ ಅವಧಿಯಲ್ಲಿ ಸಂಪುಟ ವಿಸ್ತರಣೆ ಮಾಡುವಂತೆ ಕಾಂಗ್ರೆಸ್ಸಿನ ಕೆಲವು ಮುಖಂಡರು ಮನವಿ ಮಾಡಿದ್ದಾರೆಂದು ಗೊತ್ತಾಗಿದೆ.

ಈಗಲೇ ಸಂಪುಟ ವಿಸ್ತರಣೆ ಮಾಡಿದರೆ ಅಕ್ಟೋಬರ್ 3 ರಂದು ನಡೆಯಲಿರುವ ವಿಧಾನ ಪರಿಷತ್ ಉಪಚುನಾವಣೆ ಹಾಗೂ ಬಿಬಿಎಂಪಿ ಮೇಯರ್ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂಬುದು ಕೆಲವು ಕಾಂಗ್ರೆಸ್ ನಾಯಕರ ಅಭಿಪ್ರಾಯ.

ಹಾಗೆಯೇ ಅಕ್ಟೋಬರ್ ಎರಡನೇ ವಾರದಲ್ಲಿ ಸಂಪುಟ ವಿಸ್ತರಣೆ ಮಾಡಬೇಕು. ಅಕ್ಟೋಬರ್ 25 ರ ನಂತರ ಪಿತೃಪಕ್ಷವಾಗಿರುವುದರಿಂದ ಜೆಡಿಎಸ್ ನಾಯಕರು ಸಂಪುಟ ವಿಸ್ತರಣೆಗೆ ಒಪ್ಪಲಿಕ್ಕಿಲ್ಲ ಎಂಬುದು ನಾಯಕರ ವಾದ. ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ನಡುವೆಯೇ ಸಂಪುಟ ವಿಸ್ತರಣೆ ತಿಂಗಳ ಕಾಲ ಮುಂದಕ್ಕೆ ಹೋಗಲಿದೆ ಎಂಬುದು ಲೇಟೆಸ್ಟ ಚರ್ಚೆಗೆ ಕಾರಣವಾಗಿದೆ.

Leave a Reply

Your email address will not be published.