ತಾಂಡಾಗಳಲ್ಲಿ ಸೇವಾಲಾಲ್ ಸಾಂಸ್ಕೃತಿಕ ಕೇಂದ್ರಗಳು: ಸಿಎಂ

 


ಕಲಬುರಗಿ: ರಾಜ್ಯದ ಸುಮಾರು 1500 ತಾಂಡಾಗಳಲ್ಲಿ ರೂ 10 ಲಕ್ಷ ವೆಚ್ಚದಲ್ಲಿ ಸೇವಾಲಾಲ್ ಸಾಂಸ್ಕೃತಿಕ ಕೇಂದ್ರಗಳ ನಿರ್ಮಾಣ ಯೋಜನೆಯನ್ನು ಸನ್ಮಾನ್ಯ ಮುಖ್ಯಮಂತ್ರಿ ಗಳಾದ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರು ಪುಸ್ತಿಕೆ ಬಿಡುಗಡೆ ಮಾಡುವ ಮೂಲಕ ಜಾರಿಗೊಳಿಸಿದರು.

ರಾಜ್ಯದಲ್ಲಿ ಸುಮಾರು 3373 ತಾಂಡಗಳಿದ್ದು, ಇವುಗಳಲ್ಲಿ ವಾಸ ಮಾಡುತ್ತಿರುವ ಬಂಜಾರ ಜನಾಂಗದವರು ತಮ್ಮ ಆರಾಧ್ಯ ಗುರುಗಳಾದ ಸೇವಾಲಾಲ್ ಅವರ ಹೆಸರಿನಲ್ಲಿ ಹಲವಾರು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಸ್ಥಳೀಯವಾಗಿ ಹಮ್ಮಿಕೊಳ್ಳುತ್ತ ಬರುತ್ತಿದ್ದಾರೆ.  “ಮಠ್” ಹೆಸರಿನಲ್ಲಿ ಸಣ್ಣಪುಟ್ಟ ಸಾಂಸ್ಕøತಿಕ ಕೇಂದ್ರಗಳನ್ನು ನಿರ್ಮಿಸಿಕೊಂಡು ತಮ್ಮ ಕಲೆಯನ್ನು ಅಭಿವ್ಯಕ್ತಿಗೊಳಿಸುತ್ತಾ ಬಂದಿದ್ದಾರೆ ಎಂದರು.

ಬಂಜಾರ ಜನಾಂಗದ ಮದುವೆ, ಹಬ್ಬ, ಶುಭ ಸಮಾರಂಭ, ನ್ಯಾಯ ಪಂಚಾಯಿತಿ ಮುಂತಾದ ಆಚರಣೆಗಳು ಈ “ಮಠ್” ಮುಂಭಾಗದಲ್ಲಿಯೇ ನಡೆಯುತ್ತಿವೆ. ಕರ್ನಾಟಕ ರಾಜ್ಯ ತಾಂಡ ಅಭಿವೃದ್ಧಿ ನಿಗಮ ನಡೆಸಿದ ಸಮೀಕ್ಷೆಯಿಂದ ಶೇ.45ರಷ್ಟು ಸೇವಾಲಾಲ್ ಸಾಂಸ್ಕೃತಿಕ ಭವನಗಳು ಶಿಥಿಲಾವಸ್ಥೆಯಲ್ಲಿವೆ ಎಂಬ ಅಂಶ ಬೆಳಕಿಗೆ ಬಂದಿದೆ. ಸಮೀಕ್ಷೆಯಲ್ಲಿ ವ್ಯಕ್ತವಾದ ಅಂಶಗಳನ್ನು ಆಧರಿಸಿ, ಕರ್ನಾಟಕದಲ್ಲಿ ನೆಲೆಸಿರುವ ಬಂಜಾರ ಜನಾಂಗದಲ್ಲಿ ಪಾರಂಪರಿಕವಾಗಿ ಬಂದಿರುವ ವಿಶಿಷ್ಟವಾದ ಸಂಸ್ಕøತಿ, ಕಲೆಗಳನ್ನು ಉಳಿಸಿ, ಪ್ರೋತ್ಸಾಹಿಸುವ ಸಲುವಾಗಿ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಮೂಲಕ ಸೇವಾಲಾಲ್ ಸಾಂಸ್ಕøತಿಕ ಕೇಂದ್ರಗಳನ್ನು ನಿರ್ಮಿಸಿಕೊಳ್ಳಲು ಆರ್ಥಿಕ ನೆರವು ನೀಡುವ ಯೋಜನೆಯನ್ನು ರೂಪಿಸಲಾಗಿದೆ ಎಂದು ಹೇಳಿದರು.

ರಾಜ್ಯದ 1500 ತಾಂಡಗಳಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಹಂತ ಹಂತವಾಗಿ ಸಾಂಸ್ಕೃತಿಕ ಕೇಂದ್ರಗಳನ್ನು  ನಿರ್ಮಿಸಲಾಗುವುದು. ಈ ವರ್ಷ 400 ಸೇವಾಲಾಲ್ ಸಾಂಸ್ಕøತಿಕ ಕೇಂದ್ರಗಳ ನಿರ್ಮಾಣ ಹಾಗೂ ಪುನಶ್ಚೇತನಕ್ಕೆ ಚಾಲನೆ ನೀಡಲಾಗುವುದು. ಪ್ರತಿ ಕೇಂದ್ರದ ನಿರ್ಮಾಣಕ್ಕಾಗಿ 10 ಲಕ್ಷ ರೂ.ಗಳವರೆಗೂ ಆರ್ಥಿಕ ಅನುದಾನ ನಿಡಲಾಗುವುದು. ಪ್ರಸಕ್ತ ವರ್ಷ ಈ ಉದ್ದೇಶಕ್ಕಾಗಿ 20 ಕೋಟಿ ರೂ. ವೆಚ್ಚ ಭರಿಸಲಿದ್ದು, ಮುಂದಿನ 3 ವರ್ಷಗಳಲ್ಲಿ ಒಟ್ಟಾರೆ 112 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಇದ್ದರು.

8 Responses to "ತಾಂಡಾಗಳಲ್ಲಿ ಸೇವಾಲಾಲ್ ಸಾಂಸ್ಕೃತಿಕ ಕೇಂದ್ರಗಳು: ಸಿಎಂ"

 1. Ashok pawar   September 17, 2018 at 1:07 pm

  Great initiative from Congress and JDS government Towards inclusive development of thandas.

  Reply
 2. kumar shitaram pammar   September 17, 2018 at 1:56 pm

  Kumarspmmar4@mail.com. jai sevalal

  Reply
 3. sakra naik   September 17, 2018 at 2:03 pm

  dear sir,
  great initiative from confress and jds government toward inclusive development fo thandas

  thanks
  sakra naik

  Reply
 4. SHASHINAIK R   September 17, 2018 at 2:55 pm

  God bless you sir nimage Aa devaru olledanne madtane

  Reply
 5. Shinu Rathod   September 17, 2018 at 3:57 pm

  Great sir

  Reply
 6. Shyam   September 17, 2018 at 4:06 pm

  Inta vyaktina cm madiddakke namage hemme ide. N Kotres balaga harapanahalli. Jai sevalal

  Reply
 7. Krishna   September 17, 2018 at 8:19 pm

  Well done.

  Reply
 8. Rama naik   September 17, 2018 at 10:15 pm

  God bless you sir namma thandagalu innu jaasti infroment agabeku

  Reply

Leave a Reply

Your email address will not be published.