ರಾಮಲಿಂಗಾರೆಡ್ಡಿ ಪರ ಖರ್ಗೆ ಬ್ಯಾಟಿಂಗ್ !


ಬೆಂಗಳೂರು: ಜೆಡಿಎಸ್ -ಕಾಂಗ್ರೆಸ್ ದೋಸ್ತಿ ಸರಕಾರದ ಎರಡನೇ ಹಂತದ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆಯೋ ಗೊತ್ತಿಲ್ಲ. ಆದರೆ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತ್ರ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪರವಾಗಿ ಬ್ಯಾಟು ಬೀಸಿದ್ದಾರೆ.

ಈ ಬಾರಿ ಸಂಪುಟ ವಿಸ್ತರಣೆ ಕಾಲಕ್ಕೆ ರಾಮಲಿಂಗಾರೆಡ್ಡಿಗೆ ಅವಕಾಶ ಕೊಡಬೇಕು. ಅದರಿಂದ ಲೋಕಸಭೆ ಚುನಾವಣೆಗೆ ಅನುಕೂಲವಾಗುತ್ತದೆ ಎಂದು ಖರ್ಗೆ ಹೇಳುತ್ತಿರುವುದು ವಿಶೇಷ.

ಬೆಂಗಳೂರಿನ ನಾಲ್ಕೈದು ಕ್ಷೇತ್ರಗಳು ಹಾಗೂ ಬಿಬಿಎಂಪಿ ಹಲವು ಕ್ಷೇತ್ರಗಳಲ್ಲಿ ಸಾಕಷ್ಟು ಹಿಡಿತ ಹೊಂದಿದ್ದಾರೆ. ಹೀಗಾಗಿ ರಾಮಲಿಂಗಾರೆಡ್ಡಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವದರಿಂದ ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

Leave a Reply

Your email address will not be published.