ನಾಳೆ ಬೆಳಗಾವಿಗೆ ರಾಷ್ಟ್ರಪತಿ ಕೋವಿಂದ


ಬೆಳಗಾವಿ: ಇಲ್ಲಿಯ ಪ್ರತಿಷ್ಠಿತ ಕೆಎಲ್ ಎಸ್ ಸಂಸ್ಥೆಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ರಾಮನಾಥ್ ಕೋವಿಂದ ನಾಳೆ (ಸೆ.15) ಬೆಳಗಾವಿಗೆ ಆಗಮಿಸಲಿದ್ದಾರೆ.

ನಾಳೆ ಬೆಳಗ್ಗೆ ವಿಶೇಷ ವಿಮಾನದ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಕೋವಿಂದ ಅವರನ್ನು ರಾಜ್ಯಪಾಲ ವಜೂಭಾಯ್ ವಾಲಾ, ಮುಖ್ಯಮಂತ್ರಿ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಮತ್ತು ಇತರ ನಾಯಕರು ಬರಮಾಡಿಕೊಳ್ಳಲಿದ್ದಾರೆ.

ನಂತರ 11.30 ಕ್ಕೆ ಜಿಐಟಿ ಆವರಣದಲ್ಲಿ ಆಯೋಜಿಸಲಾಗಿರುವ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಕೋವಿಂದ ಪಾಲ್ಗೊಳ್ಳುವರು.

Leave a Reply

Your email address will not be published.