ಎಫ್ ಐ ಆರ್ ರದ್ದುಗೊಳಿಸಲು ಅರ್ಜುನ ಸರ್ಜಾ ಹೈಕೋರ್ಟಗೆ ಮೊರೆ ಹೋದ್ರು !


ಬೆಂಗಳೂರು: ತಮ್ಮ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ ಐ ಆರ್ ರದ್ದುಕೋರಿ ಬಹುಭಾಷಾ ನಟ ಅರ್ಜುನ್ ಸರ್ಜಾ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ನಟಿ ಶೃತಿ ಹರಿಹರನ್ ಸಲ್ಲಿಸಿರುವ ದೂರಿನ ಮೇರೆಗೆ ದಾಖಲಿಸಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಅವರು ಹೈಕೋರ್ಟ್ ಗೆ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಕೋರಿದ್ದು, ಅವರ ಪರವಾಗಿ ನ್ಯಾಯವಾದಿ ಬಿ.ವಿ. ಆಚಾರ್ಯ ವಾದ ಮಂಡಿಸುವ ಸಾಧ್ಯತೆ ಇದೆ.

ರಿಟ್ ಅರ್ಜಿಯ ವಿಚಾರಣೆಯನ್ನು ನಾಳೆಯೇ ನಡೆಸುವಂತೆಯೂ ಸರ್ಜಾ ಪರ ವಕೀಲರು ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published.