ಸಂಗೀತ ನಿರ್ದೇಶಕ ಬಾಲಭಾಸ್ಕರ ವಿಧಿವಶ


ತಿರುವನಂತಪುರ: ಮಲಯಾಳಂ ಸಿನಿಮಾ ಸಂಗೀತ ನಿರ್ದೇಶಕ ಬಾಲಭಾಸ್ಕರ್ (40) ಸೋಮವಾರ ತಡರಾತ್ರಿ ನಿಧನಹೊಂದಿದ್ದಾರೆ.

ಬಾಲಭಾಸ್ಕರ್ ಅವರು ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡು  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ತಿರುವನಂತಪುರದ ಅನಂತಪುರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು,ಸೋಮವಾರ ತಡರಾತ್ರಿ 1 ಗಂಟೆ ಸುಮಾರಿಗೆ ಅಸುನೀಗಿದರು ಎಂದು ಮೂಲಗಳು ತಿಳಿಸಿವೆ.

ಸೆಪ್ಟೆಂಬರ್ 25 ರಂದು ತಿರುವನಂತಪುರಂನ ಪಳ್ಳಿಪ್ಪುರ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಬಾಲಭಾಸ್ಕರ್ ಅವರ ಪುತ್ರಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಳು. ಬಾಲಭಾಸ್ಕರ್, ಪತ್ನಿ ಲಕ್ಷ್ಮಿ, ಚಾಲಕ ಅರ್ಜುನ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದರು.

Leave a Reply

Your email address will not be published.