ಬಿಬಿಎಂಪಿ ಉಪಮೇಯರ್ ರಮೀಳಾ ಹಠಾತ್ ನಿಧನ


ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಉಪಮೇಯರ್ ರಮೀಳಾ ಉಮಾಶಂಕರ್ (44) ತೀವ್ರ ಹೃದಯಾಘಾತದಿಂದ ನಿಧನಹೊಂದಿದ್ದಾರೆ.

ಇತ್ತೀಚೆಗಷ್ಟೇ ನಡೆದ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಗಂಗಾಂಬಿಕಾ ಮೇಯರ್ ಹಾಗೂ ಜೆಡಿಎಸ್ ನ ರಮೀಳಾ ಉಪಮೇಯರ್ ಆಗಿ ಆಯ್ಕೆಯಾಗಿದ್ದರು.

ನಿನ್ನೆ ಮೆಟ್ರೋ ಟ್ರೀನ್ ವೊಂದರ  ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಪರಮೇಶ್ವರ, ಮೇಯರ್ ಗಂಗಾಂಬಿಕೆ ಅವರೊಂದಿಗೆ ಪಾಲ್ಗೊಂಡಿದ್ದರು.

ದೇವೇಗೌಡ ಕಂಬನಿ:

ಸಾಮಾಜಿಕ ಕಳಕಳಿ ಹೊಂದಿದ್ದ ರಮೀಳಾ ನಿಧನಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಕಂಬನಿ ಮಿಡಿದಿದ್ದಾರೆ.

ದೆಹಲಿ ಭೇಟಿಯಲ್ಲಿರುವ ಗೌಡರು, ರಮೀಳಾ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಪ್ರವಾಸ ಮೊಟಕುಗೊಳಿಸಿ ಇಂದು ಬೆಂಗಳುರಿಗೆ ಮರಳಲಿದ್ದಾರೆ.

ಏತನ್ಮಧ್ಯೆ ರಮೀಳಾ ನಿಧನಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿರುವ ಸಿಎಂ ಕುಮಾರಸ್ವಾಮಿ, ಪೂರ್ವ ನಿಯೋಜಿತ ಕಾರ್ಯಕ್ರಮಗಳಿರುವುದರಿಂದ ರಮೀಳಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಗುತ್ತಿಲ್ಲ ಎಂದು ಕುಟುಂಬಸ್ಥರಿಗೆ ತಿಳಿಸಿದ್ದಾರೆ.

ಮೃತರ ಗೌರವಾರ್ಥ ಬಿಬಿಎಂಪಿಯ ಎಲ್ಲ ಕಚೇರಿಗಳಿಗೆ ಇಂದು ರಜೆ ಘೋಷಿಸಲಾಗಿದೆ.

Leave a Reply

Your email address will not be published.