ನಿಗಮ-ಮಂಡಳಿ ಬೇಡ ಎನ್ನುತ್ತಿರುವ ಶಾಸಕರು: ಕೈ ನಾಯಕರಿಗೆ ಇನ್ನಷ್ಟು ಕಗ್ಗಂಟು !


ಬೆಂಗಳೂರು:ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರಕಾರದ ಸಂಪುಟ ವಿಸ್ತರಣೆ ಸನ್ನಿಹಿತವಾಗುತ್ತಿರುವ ಬೆನ್ನಲ್ಲೇ ಸಚಿವ ಸ್ಥಾನ ಆಕಾಂಕ್ಷಿಗಳು ದೆಹಲಿಯತ್ತ ಮುಖಮಾಡಿದ್ದಾರೆ.

ಕಾಂಗ್ರೆಸ್ ಪಾಲಿನ 6 ಸಚಿವ ಸ್ಥಾನಗಳಿಗೆ 22 ಕ್ಕೂ ಹೆಚ್ಚು ಶಾಸಕರು ಆಕಾಂಕ್ಷಿಗಳಿರುವುದು  ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.

ಸಚಿವ ಸ್ಥಾನ ಸಿಗದವರಿಗೆ ನಿಗಮ-ಮಂಡಳಿಗಳಿಗೆ ನೇಮಕ ಮಾಡುವ ಮೂಲಕ ಸಮಾಧಾನಪಡಿಸಬೇಕೆಂಬ ವರಷ್ಠರ ಪ್ಲಾನ್ ಗೆ ಬಹುತೇಕ ಶಾಸಕರು ಒಪ್ಪುವ ಸಾಧ್ಯತೆಗಳು ತೀರಾ ಕಡಿಮೆ ಎನ್ನಲಾಗುತ್ತಿದೆ. ಸಚಿವ ಸ್ಥಾನ ಸಿಗದೇ ಇದ್ದರೂ ಪರವಾಗಿಲ್ಲ, ನಿಗಮ-ಮಂಡಳಿಗಳಿಗೆ ನೇಮಕ ಮಾಡುವುದು ಬೇಡ ಎಂದು ಬಹುತೇಕ ಶಾಸಕರು ಹೇಳಿದ್ದಾರೆ ಎನ್ನಲಾಗುತ್ತಿದೆ.

ಆಕಾಂಕ್ಷಿಗಳ ಪೈಕಿ ಎರಡು ಮತ್ತು ಅದಕ್ಕಿಂತ ಹೆಚ್ಚು ಬಾರಿ ಆಯ್ಕೆಯಾದವರೇ ಹೆಚ್ಚಾಗಿದ್ದು, ಹೀಗಾಗಿ ಎಚ್. ಕೆ.ಪಾಟೀಲ, ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ ಮೊದಲಾದ ಹಿರಿಯರು ಸಚಿವ ಸ್ಥಾನಕ್ಕೆ ಪೈಪೋಟಿ ನಡೆಸುವುದು ಕಷ್ಟ ಸಾಧ್ಯವಾಗಿದೆ.

ಇದುವರೆಗೂ ಸಚಿವ ಸ್ಥಾನವೇ ಸಿಗದ 2 ಕ್ಕಿಂತ ಹೆಚ್ಚು ಬಾರಿ ಆಯ್ಕೆಯಾಗಿರುವ ಶಾಸಕರಿಗೆ ಮಣೆ ಹಾಕಲು ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.

ಇಷ್ಟರಲ್ಲಿಯೇ ಲೋಕಸಭೆ ಚುನಾವಣೆಗೆ ಪಕ್ಷ ಸಜ್ಜಾಗಬೇಕಿರುವುದರಿಂದ ಹೇಗಾದರೂ ಮಾಡಿ ಶಾಸಕರ ಮನವೊಲಿಸಲು ಹಿರಿಯ ನಾಯಕರು ಕಸರತ್ತು ನಡೆಸಿದ್ದಾರೆ. ಅಸಮಾಧಾನ ಶಮನಗೊಳಿಸುವ ಹೊಣೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವಹಿಸಿರುವುದೂ ವಿಶೇಷ.

Leave a Reply

Your email address will not be published.