ದೇವೇಗೌಡ್ರು ವೇಣುಗೋಪಾಲ ಜತೆ ಏನು ಮಾತಾಡಿದ್ರು??


ಹೊಸದಿಲ್ಲಿ: ಜೆಡಿಎಸ್ -ಕಾಂಗ್ರೆಸ್ ದೋಸ್ತಿ ಸರಕಾರದ ಎರಡನೇ ಹಂತದ ಸಂಪುಟ ವಿಸ್ತರಣೆಯ ದಿನಾಂಕ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಚುರುಕಾಗುತ್ತಿದ್ದು, ಅಸಮಾಧಾನ ಶಮನಗೊಳಿಸಲು ನಾಯಕರು ಇನ್ನಿಲ್ಲದ ಸರ್ಕಸ್ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿನ ಅಸಮಾಧಾನ ಮತ್ತೆ ಭುಗಿಲೇಳಬಾರದೆಂಬ ಕಾರಣಕ್ಕೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರೇ ಖುದ್ದು ಅಖಾಡಾಕ್ಕಿಳಿದಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ ಅವರನ್ನು ದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿ  ಮಾಡಿ ಮಾತುಕತೆ ನಡೆಸಿದ್ದಾರೆ.

ನಿಗಮ -ಮಂಡಳಿಗಳ ನೇಮಕ, ಸಂಪುಟ ವಿಸ್ತರಣೆ ಜತೆಗೆ ಲೋಕಸಭೆ ಚುನಾವಣೆ ತಯಾರಿ ಕುರಿತಂತೆಯೂ ದೇವೇಗೌಡ ವೇಣುಗೋಪಾಲ ಅವರೊಂದಿಗೆ ಮಾತನಾಡಿದರು ಎಂದು ಹೇಳಲಾಗಿದೆ.

Leave a Reply

Your email address will not be published.