ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ಮತ್ತೆ ಚಾಲನೆ


ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಭಾರೀ ಸುದ್ದಿಗೆ ಗ್ರಾಸವಾಗಿದ್ದ ಲಿಂಗಾಯತ ಪ್ರತ್ಯೇಕ ಧರ್ಮ ರಚನೆ ಹೋರಾಟಕ್ಕೆ ಈಗ ಮತ್ತೆ ಚಾಲನೆ ಸಿಕ್ಕಿದ್ದು, ಹೊಸದಿಲ್ಲಿಯಲ್ಲಿ ಮೂರು ದಿನಗಳ ಕಾಲ ಲಿಂಗಾಯತ ಧರ್ಮೀಯರ ಸಮಾವೇಶ ನಡೆಯಲಿದೆ.

ಡಿಸೆಂಬರ್ 10 ರಿಂದ ಮೂರು ದಿನಗಳ ಕಾಲ ತಾಲ್ಕಟೋರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಗೋವಾ ರಾಜ್ಯಗಳಿಂದ ಬಸವತತ್ವ ಪ್ರತಿಪಾದಕರು ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರಿನಲ್ಲಿ ಈ ವಿಷಯ ತಿಳಿಸಿರುವ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ, ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲು ಈ ಸಮಾವೇಶ ನಡೆಸಲಾಗುತ್ತಿದೆ ಎಂದು  ಹೇಳಿದರು.

ಈ ಹಿಂದೆ ಸಿದ್ದರಾಮಯ್ಯ ಸರಕಾರ ಪ್ರತ್ಯೇಕ ಧರ್ಮ ರಚನೆ ಕುರಿತಂತೆ  ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಆದರೆ, ಮೋದಿ ಸರಕಾರ ಅದಕ್ಕೆ ಅನುಮೋದನೆ ನೀಡಿಲ್ಲ.  ಇದೀಗ ಸಮಾವೇಶದ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಲಾಗುವುದು ಎಂದು ಅವರು ತಿಳಿಸಿದರು.

Leave a Reply

Your email address will not be published.