ಕಾಂಗ್ರೆಸ್ ಸೇರಲು ಮುಂದಾದ ಸಚಿವ ಶಂಕರ್ !


ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಣೇಬೆನ್ನೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿ ಜೆಡಿಎಸ್ -ಕಾಂಗ್ರೆಸ್ ದೋಸ್ತಿ ಸರಕಾರದಲ್ಲಿ ಸಚಿವ ಸ್ಥಾನ ಗಿಟ್ಟಿಸಿರುವ ಆರ್. ಶಂಕರ್ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಜ್ಜಾಗಿದ್ದಾರೆ.

ಮೈಸೂರಿನಲ್ಲಿ ಈ ಕುರಿತಂತೆ ಹೇಳಿಕೆ ನೀಡಿರುವ ಅರಣ್ಯ ಸಚಿವ ಶಂಕರ್ ತಾವು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ತಿಳಿಸಿದರು.

ಒಳ್ಳೆಯ ಮುಹೂರ್ತ ನೋಡಿ ಪಕ್ಷ ಸೇರ್ಪಡೆಯಾಗುವುದಾಗಿಯೂ ಹೇಳಿರುವ ಅವರು ಕುಮಾರಸ್ವಾಮಿ ಸಂಪುಟದಲ್ಲಿ ತಮ್ಮ ಖಾತೆ ಬದಲಾವಣೆಯಾಗುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

Leave a Reply

Your email address will not be published.