ಶಿವಮೊಗ್ಗದಲ್ಲಿ ಇಂದು ದೋಸ್ತಿ ಸಮಾವೇಶ


ಶಿವಮೊಗ್ಗ: ನವೆಂಬರ್ 3 ರಂದು ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಪಣತೊಟ್ಟಂತಿರುವ ಜೆಡಿಎಸ್ -ಕಾಂಗ್ರೆಸ್ ದೋಸ್ತಿ ಪಕ್ಷಗಳು ಇಂದು ನಗರದಲ್ಲಿ ಜಂಟಿ ಸಮಾವೇಶ ಆಯೋಜಿಸಿವೆ.

ಜೆಡಿಎಸ್ ವರಿಷ್ಠ , ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಡಿಕೆ. ಶಿವಕುಮಾರ್ ಸೇರಿದಂತೆ ಅನೇಕ ಮುಖಂಡರು ಜಂಟಿ ಸಮಾವೇಶದಲ್ಲಿ ಪಾಲ್ಗೊಂಡು ಅಭ್ಯರ್ಥಿ ಮಧು ಬಂಗಾರಪ್ಪ ಪರ ಮತಯಾಚನೆ ಮಾಡಲಿದ್ದಾರೆ.

ಏತನ್ಮಧ್ಯೆ ಜೆಡಿಎಸ್-ಕಾಂಗ್ರೆಸ್ ದೋಸ್ತಿಗಳಿಗೆ ಟಾಂಗ್ ಕೊಡಲು ಸಿದ್ಧತೆಯಲ್ಲಿ ತೊಡಗಿರುವ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್. ಯಡಿಯೂರಪ್ಪ ಭದ್ರಾವತಿಯಲ್ಲಿ ಇಂದು ಆರು ಸರಣಿ ಸಭೆಗಳನ್ನು ನಡೆಸಲಿದ್ದು, ವಿವಿಧ ಸಮುದಾಯಗಳೊಂದಿಗೆ ಮಾತುಕತೆಯಾಡಲಿದ್ದಾರೆ.

Leave a Reply

Your email address will not be published.