ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿರುವ ಜನಾರ್ದನ ರೆಡ್ಡಿ ಪೊಲೀಸರಿಗೆ ಶರಣಾಗ್ತಾರಾ?


ಬೆಂಗಳೂರು: ಅಂಬಿಡೆಂಟ್ ಸಂಸ್ಥೆಯ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಗೆ ಬೇಕಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಒಂದೆಡೆ ನಿರೀಕ್ಷಣಾ ಜಾಮೀನು ಕೋರಿ ರಿಟ್ ಅರ್ಜಿ ಸಲ್ಲಿಸಿದ್ದು, ಇನ್ನೊಂದೆಡೆ ಪೊಲೀಸರಿಗೆ ಶರಣಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಸದ್ಯ ಹೈದರಾಬಾದನಲ್ಲಿ ತಲೆಮರೆಸಿಕೊಂಡಿರುವ ರೆಡ್ಡಿ ಪರ ವಕೀಲ ಚಂದ್ರಶೇಖರ ಸಿಟಿ ಸಿವಿಲ್ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಈ ಮಧ್ಯೆ ಸಿಸಿಬಿ ಪೊಲೀಸರ ನಿರಂತರ ಶೋಧ ಕಾರ್ಯದಿಂದ ರೆಡ್ಡಿ ಕುಟುಂಬ ತೀವ್ರ ಒತ್ತಡಕ್ಕೆ ಒಳಗಾಗಿದೆ ಎನ್ನಲಾಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಪೊಲೀಸರಿಗೆ ಶರಣಾಗುವ ನಿರ್ಧಾರಕ್ಕೆ ಅವರು ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಸಂಜೆ ಬೆಂಗಳೂರಿಗೆ ಆಗಮಿಸಿ ರೆಡ್ಡಿ ಪೊಲೀಸರಿಗೆ ಶರಣಾಗುವ ಸಾಧ್ಯತೆಗಳು ನಿಚ್ಚಳವಾಗಿವೆ. ರೆಡ್ಡಿ ಪೊಲೀಸರಿಗೆ ಶರಣಾಗುವ ನಿಟ್ಟಿನಲ್ಲಿ ಅವರ ಪರಮಾಪ್ತ, ಶಾಸಕ ಶ್ರೀರಾಮುಲು ಮಧ್ಯಸ್ಥಿಕೆ ವಹಿಸಿದ್ದಾರೆ ಎಂದೂ ಹೇಳಲಾಗುತ್ತಿದೆ.

Leave a Reply

Your email address will not be published.