ಕೆಪಿಎಸ್ ಸಿ ಕಚೇರಿಯಲ್ಲಿ ಮಹಿಳೆಗೆ ಚಾಕು ಇರಿದ ಸಹೋದ್ಯೋಗಿ


ಬೆಂಗಳೂರು: ಕೆಪಿಎಸ್ ಸಿ ಕಚೇರಿಯಲ್ಲಿ ಮಹಿಳಾ ಸಹೋದ್ಯೋಗಿ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ ಚಾಕುವಿನಿಂದ ಇರುದು ಪರಾರಿಯಾದ ಆಘಾತಕಾರಿ ಘಟನೆ ನಡೆದಿದೆ.

ನಟರಾಜ ಎಂಬಾತ ಜಯಲಕ್ಷ್ಮಿ ಹಾಗೂ ರಾಮು ಎಂಬುವವರ ಮೇಲೆ ಹಲ್ಲೆ ನಡೆಸಿದ ಪರಾರಿಯಾಗಿದ್ದಾನೆ.  ಜಯಲಕ್ಷ್ಮಿ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರನ್ನು  ಮಲ್ಲಿಗೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಜಯಲಕ್ಷ್ಮಿ ಹಾಗೂ ನಟರಾಜ  ಕೆಪಿಎಸ್ ಸಿ ಕಚೇರಿಯಲ್ಲಿ ಸೀನಿಯರ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಟರಾಜ್ ಬೆಳಗ್ಗೆ ಪೇಪರ್ ನಲ್ಲಿ ಚಾಕು ಸುತ್ತಿಕೊಂಡು ಬಂದು ಹಲ್ಲೆ ನಡೆಸಿದ್ದಾನೆ. ಕೆಪಿಎಸ್ ಸಿ ಕಚೇರಿಯಲ್ಲಿ ಕೆಲ ಕಾಲ ಭಯದ ವಾತಾವರಣ ಸೃಷ್ಠಿಯಾಗಿತ್ತು.

ಸ್ಥಳಕ್ಕ ವಿಧಾನಸೌಧ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಹಿಂದೆ ಲೋಕಾಯುಕ್ತ ಕಚೇರಿಗೆ ನುಗ್ಗಿದ ವ್ಯಕ್ತಿಯೊಬ್ಬ ನ್ಯಾ. ವಿಶ್ವನಾಥ ಶೆಟ್ಟಿ ಅವರಿಗೆ ಚಾಕು ಇರಿದಿದ್ದ ಪ್ರಸಂಗವೂ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಕೆಪಸಿಸಿ ಕಚೇರಿಯಲ್ಲಿ ಇಂತಹದ್ದೇ ಪ್ರಕರಣ ನಡೆದಿದೆ. ಇನ್ನಾದರು ಪೊಲೀಸ ಇಲಾಖೆ ಎಚ್ಚತ್ತು  ಸರಕಾರ ಕಚೇರಿಗಳಿಗೆ ಸೂಕ್ತ ಭದ್ರತೆ ಕಲ್ಪಿಸಲಿ ಎಂಬುದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave a Reply

Your email address will not be published.