ಪ್ರತಿಭಟನೆಯಲ್ಲಿ ಶುಕ್ರವಾರ ಕಾಲ ಕಳೆದ ಕೈ-ಕಮಲ ಪಡೆಗಳು !


ಬೆಂಗಳೂರು: ರಾಜ್ಯ ಸರಕಾರ  ನಾಳೆ  ಟಿಪ್ಪು ಜಯಂತಿ ಆಚರಣಗೆ ಮುಂದಾಗಿರುವುದನ್ನು ಪ್ರತಿಭಟಿಸಿ ಭಾರತೀಯ ಜನತಾಪಕ್ಷವು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದರೆ, ಇನ್ನೊಂದೆಡೆ ನೋಟು ನಿಷೇಧಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಕರಾಳ ದಿನ ಆಚರಣೆ ಮಾಡಿತು.

ಮೈಸೂರು, ಕೊಡಗು, ಚಿತ್ರದುರ್ಗಗಳಲ್ಲಿ ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಸ್ವಲ್ಪ ಜೋರಾಗಿಯೇ ಪ್ರತಿಭಟನೆ ನಡೆಸಿತು. ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು ಟಿಪ್ಪು ಜಯಂತಿ ಆಚರಣೆಗೆ ಭಾರೀ ಪ್ರಮಾಣದಲ್ಲಿ ವಿರೋಧ ವ್ಯಕ್ತಪಡಿಸಿದರು.

ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ನೇತೃತ್ವದಲ್ಲಿ ಕರಾಳ ದಿನ ಆಚರಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆ  ಕೂಗಿ ಆಕ್ರೋಷ ವ್ಯಕ್ತಪಡಿಸಿದರು.

Leave a Reply

Your email address will not be published.