ಶಹಾಪುರ:ಯಾದಗಿರಿ ಜಿಲ್ಲಾ ನಾಲ್ಕನೇ ಸಮ್ಮೇಳನಾಧ್ಯಕ್ಷರಿಗೆ ಅಧಿಕೃತ ಆಹ್ವಾನ


ಶಹಾಪುರ: ಯಾದಗಿರಿ ಜಿಲ್ಲಾ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಶಹಾಪುರದ ಖ್ಯಾತ ಹಿರಿಯ ಲೇಖಕರಾದ ಸಿದ್ದರಾಮ ಹೊನ್ಕಲ್ ಅವರಿಗೆ ಅವರ ನಿವಾಸದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಅಧಿಕೃತ ಆಹ್ವಾನ ನೀಡಿ ಸನ್ಮಾನಿಸಲಾಯಿತು.

ನಿಯೋಜಿತ ಸಮ್ಮೇಳನಾಧ್ಯಕ್ಷರಾದ ಸಿದ್ದರಾಮ ಹೊನ್ಕಲ್ ಮಾತನಾಡಿ ಇದೊಂದು ನಾಡು ನುಡಿ ಜಾತ್ರೆಯಾಗಿದ್ದು ಬೇಧ ಭಾವ ತೊರೆದು ೪ ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದು ನುಡಿದರು

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಸಿದ್ದಪ್ಪ ಹೊಟ್ಟಿ ಮಾತನಾಡಿ ಸಾಹಿತಿಗಳು, ಕಲಾವಿದರು, ಕವಿಗಳು, ಪ್ರಗತಿಪರ ಚಿಂತಕರು, ಹೋರಾಟಗಾರರು, ಕನ್ನಡಪರ ಸಂಘಟನೆಗಳ ಮುಖಂಡರು ಹೆಚ್ಚಿನ ರೀತಿಯಲ್ಲಿ ಭಾಗವಹಿಸಿ ಸಮ್ಮೇಳನದ ಯಶಸ್ಸಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಚಂದ್ರಕಾಂತ ಕರದಳ್ಳಿ, ಶಹಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿದ್ದಲಿಂಗಣ್ಣ ಆನೆಗುಂದಿ,ಅಯ್ಯಣ್ಣ ಹುಂಡೇಕರ್, ಡಾ: ಸುಭಾಷಚಂದ್ರ ಕೌಲಗಿ, ಪ್ರಕಾಶ ಅಂಗಡಿ, ಡಾ ಎಸ್, ಎಸ್, ನಾಯಕ್ ಡಾ: ಭೀಮರಾಯ ಲಿಂಗೇರಿ,ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

Your email address will not be published.