ಪಂಚ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಕೊಪ್ಪಳದಲ್ಲಿ ಸಂಭ್ರಮಾಚರಣೆ


ಲೋಕಸಭಾ ಚುನಾವಣೆಗೆ ಈ ಫಲಿತಾಂಶ ಹೆಚ್ಚು ಬಲವನ್ನು ತಂದಿದೆ- ರಾಜಶೇಖರ್ ಹಿಟ್ನಾಳ

ಕೊಪ್ಪಳ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸಾಧಿಸಿದ ವಿಜಯದ ಹಿನ್ನಲೇಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಕೊಪ್ಪಳ ನಗರದ ಅಶೋಕ ವೃತ್ತದ ಬಳಿ ಸಹಿ ಹಂಚಿ, ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಿ ಸಂಭ್ರಮಸಿದರು.

ಐದು ರಾಜ್ಯಗಳ ಚುನಾವಣೆಯಲ್ಲಿ ಜನ ಬಿಜೆಪಿಯನ್ನು ತಿರಸ್ಕಿರಿದ್ದಾರೆ, ಇದು ಮುಂಬರುವ ೨೦೧೯ ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ಗೆ ಹೆಚ್ಚು ಬಲವನ್ನು ತಂದುಕೊಟ್ಟಿದೆ ಎಂದು ಜಿ. ಪಂ. ಮಾಜಿ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ ಹೇಳಿದರು.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಕ್ಷ ಹೆಚ್ಚು ಪ್ರಬಲವಾಗಿ ಬೆಳೆಯುತ್ತಿದೆ, ಮತ್ತೇ ದೇಶದ ಜನ ಕಾಂಗ್ರೆಸ್‌ನ್ನು ಒಪ್ಪಿಕೊಂಡು ಬೆಂಬಲಿಸಿದ್ದು, ಬಿಜೆಪಿಯ ಸುಳ್ಳು ಆಶ್ವಾಸನೆಗಳು ಈ ಚುನಾವಣೆಯಲ್ಲಿ ನಡೆದಿಲ್ಲವೆಂದು ನಗರ ಬ್ಲಾಕ್ ಅಧ್ಯಕ್ಷ ಕಾಟನ್ ಪಾಶಾ, ಪ್ರಧಾನ ಕಾರ್ಯದರ್ಶಿ ಕೃಷ್ಣಾ ಇಟ್ಟಂಗಿ, ಕೆಪಿಸಿಸಿ ಮಹಿಳಾ ರಾಜ್ಯ ಕಾರ್ಯದರ್ಶಿ ಕಿಶೋರಿ ಬೂದನೂರ, ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆ ಇಂದಿರಾ ಭಾವಿಕಟ್ಟಿ, ಜಿಲ್ಲಾ ವಕ್ತಾರ ಕುರಗೋಡ ರವಿ ಇತರರು ಮಾತನಾಡಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಅಕ್ಬರ್ ಪಾಶಾ ಪಲ್ಟನ್, ಅರುಣ ಅಪ್ಪುಶೆಟ್ಟಿ, ಅಜೀಮುದ್ದಿನ್ ಅತ್ತಾರ್, ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಯಶೋಧಾ ಮರಡಿ, ಸದಸ್ಯರಾದ ಮಂಜುನಾಥ ಜಿ. ಗೊಂಡಬಾಳ ಮತ್ತು ಸವಿತಾ ಗೋರಂಟ್ಲಿ, ಮಾಜಿ ನಗರಸಭೆ ಸದಸ್ಯ ಮಾನ್ವಿ ಪಾಶಾ, , ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಗುರುಬಸವರಾಜ ಹಳ್ಳಿಕೇರಿ, ಮಾಜಿ ಕುಡಾ ಅಧ್ಯಕ್ಷ ಜುಲ್ಲು ಖಾದರ್ ಖಾದ್ರಿ, ಕಾರ್ಯದರ್ಶಿ ಉಮಾ ಜನಾದ್ರಿ, ಶ್ರೀನಿವಾಸ್ ಪಂಡಿತ್, ವಾಜೀದ್ ಎಂ.ಎ., ನಾಗರಾಜ ಬಳ್ಳಾರಿ, ಎಪಿಎಂಸಿ ಸದಸ್ಯ ಮೆಹಬೂಬ ಅರಗಂಜಿ, ಮಲ್ಲಮ್ಮ ಇತರರು ಇದ್ದರು.

Leave a Reply

Your email address will not be published.