ದೋಸ್ತಿ ಸರಕಾರದ ಮೇಲೆ ನನಗೆ ವಿಶ್ವಾಸವಿಲ್ಲ: ಮಾಜಿ ಶಾಸಕ ರಾಜಣ್ಣ


ಮಧುಗಿರಿ: ಉಪ ಮುಖ್ಯಮಂತ್ರಿಗಳ ಒಳ್ಳೆಯ ತನವನ್ನು ಕೆಲವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಕೆಲ ಘಟನೆಗಳಿಂದಾಗಿ ನನಗೆ ದೋಸ್ತಿ ಸರಕಾರದ ಮೇಲೆ ನನಗೆ ವಿಶ್ವಾಸ ವಿಲ್ಲಾದಂತಾಗಿದೆ ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದಾರೆ.

ಪಟ್ಟಣದ ಎಂ.ಎನ್.ಕೆ ಸಮುದಾಯ ಭವನದಲ್ಲಿ ತಾಲ್ಲೂಕು ಕಾಂಗ್ರೇಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಶಕ್ತಿ ಅಭಿಯಾನ ಮತ್ತು ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರದ ಶಾಸಕನಾಗಿ ನಾನು ಶಕ್ತಿ ಮೀರಿ ಹಲವಾರು ಅಭಿವೃದ್ದಿ ಕೆಲಸ ಮಾಡಿರುವುದು ನನಗೆ ತೃಪ್ತಿ ತಂದಿದೆ. ನನ್ನ ಅವಧಿಯಲ್ಲಿ ಕುಡಿಯುವ ನೀರಿಗಾಗಿ ಯಾವುದೇ ರೀತಿ  ತೊಂದರೆಯಾಗದಂತೆ ಹಲವು  ಕ್ರಮಗಳನ್ನು ತೆಗೆದುಕೊಂಡಿದ್ದೆ, ಕ್ಷೇತ್ರದಲ್ಲಿ ಕೆಲವರು ಮುಂದಿನ ವಿಧಾನಸಬಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಅಪ ಪ್ರಚಾರ ಮಾಡುತ್ತಿದ್ದಾರೆ ಅವರಿಗೆ ಮುಂದಿನ ದಿನಗಳಲ್ಲಿ  ತಕ್ಕ ಪಾಠ ಕಲಿಸಲಾಗುವುದು.  ಈಗಿನ ಶಾಸಕರು ಹೇಮಾವತಿ ನೀರನ್ನು ಸಿದ್ದಾಪುರ ಕೆರೆಗೆ ಭರ್ತಿ ಮಾಡಿಸುವಲ್ಲಿ ವಿಫಲವಾಗಿರುವುದರಿಂದ ಪಟ್ಟಣದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೂತನವಾಗಿ ಆಯ್ಕೆಯಾಗಿರುವ ಪುರಸಭಾ ಸದಸ್ಯರಿಗೆ ಮುಂದಿನ ದಿನಗಳಲ್ಲಿ ನೀರಿನ ಭೀಕರತೆಯ ಅನುಭವ ತಟ್ಟಲಿದೆ ಎಂದರು.

ಇತ್ತೀಚೆಗೆ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ, ಜೂಜು, ಮಧ್ಯ, ಮಟ್ಕಾದಂತಹ ಆಕ್ರಮ ಚಟುವಟಿಕೆಗಳು ಹೆಚ್ಚಾಗಿತ್ತಿದ್ದು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು.

ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ದಿಂದ ಮಾತ್ರ ದೇಶದ ಜನರು ಆರ್ಥಿಕವಾಗಿ ಸಧೃಢರಾಗಲು ಸಾಧ್ಯ. ನೆರೆಯ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶವನ್ನ ಗಮನಿಸಿದರೆ ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿಯವರು ಪ್ರಧಾನಿಯಾಗುವುದರಲ್ಲಿ ಯಾವುದೇ ಅನುಮಾನಗಳಿಲ್ಲ ಕಾರ್ಯಕರ್ತರು ಹೆಚ್ಚು ಹೆಚ್ಚಾಗಿ ಶಕ್ತಿ ಅಭಿಯಾನಕ್ಕೆ ಸೇರ್ಪಡೆಯಾಗಿ ಕೈ ಪಕ್ಷ ವನ್ನು ಮತ್ತಷ್ಟೂ ಬಲ ಪಡಿಸಿ ಎಂದರು.

ವಿಧಾನಪರಿಷತ್ ಸದಸ್ಯ ಎಂ.ಸಿ.ವೇಣುಗೋಪಾಲ್ ಮಾತನಾಡಿ, ಚರಿತ್ರೆಯನ್ನು ಸೃಷ್ಠಿಸುವಂತಹ ನಾಯಕರುಗಳು ಚುನಾವಣೆಯಲ್ಲಿ ಸೋತಿದ್ದಾರೆ. ಕ್ಷೇತ್ರದಲ್ಲಿ ಸಾವಿರಾರು ಕೋಟಿ ರೂ ವೆಚ್ಚದ ಅಭಿವೃದ್ದಿಯನ್ನು ಕೈಗೊಂಡಿದ್ದ ಕೆ.ಎನ್.ರಾಜಣ್ಣ ಅವರನ್ನು ಚುನಾವಣೆಯಲ್ಲಿ ಮತದಾರರು ಕೈ ಹಿಡಿಯಬೇಕಿತ್ತು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಿ.ಜೆ.ರಾಜಣ್ಣ, ಚೌಡಪ್ಪ, ಮಂಜುಳಾ ಆದಿನಾರಾಯಣರೆಡ್ಡಿ ಎಐಸಿಸಿ ಕಾರ್ಯದರ್ಶಿ ಸುವರ್ಣಮ್ಮ ರಾಜ್ಯ ಸಹಕಾರ ಮಹಾಮಂಡಳಿ ಅಧ್ಯಕ್ಷ ಎನ್.ಗಂಗಣ್ಣ, ತಾಲ್ಲೂಕು ಪಂಚಾಯಿತಿ ಸದಸ್ಯೆ ಇಂದಿರಾ ದೇನಾ ನಾಯ್ಕ, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಸೊಸೈಟಿ ರಾಮಣ್ಣ, ಎಪಿಎಂಸಿ ಅಧ್ಯಕ್ಷ ಎಂ.ಬಿ.ಮರಿಯಣ್ಣ, ಪುರಸಭೆ ಸದಸ್ಯರಾದ ಎಂ.ವಿ.ಗೋವಿಂದರಾಜು, ಎಂ.ಎಸ್.ಚಂದ್ರಶೇಖರ್, ಅಲೀಂ, ಸಾಧಿಕ್, ಸುಜಾತ, ಶೋಭಾರಾಣಿ ಇತರರು ಇದ್ದರು.

Leave a Reply

Your email address will not be published.