ಬಾಯ್ಲರ್ ಸ್ಪೋಟದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ಮಾಜಿ ಸಚಿವ ಮುರುಗೇಶ್ ನಿರಾಣಿ


ಬಾಗಲಕೋಟೆ : ಮುಧೋಳ ತಾಲೂಕಿನ ಕುಳಲಿ ಬಳಿ ಇರುವ ಸಕ್ಕರೆ ಕಾರ್ಖಾನೆಯ ಡಿಸ್ಟಿಲರಿ ಸಂಸ್ಕರಣಾ ಘಟಕದಲ್ಲಿ ಸ್ಪೋಟ ಸಂಭವಿಸಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ದುರ್ಘಟನೆ ಬಳಿಕ ಫ್ಯಾಕ್ಟರಿ ಮಾಲೀಕ, ಮಾಜಿ ಸಚಿವ ಮುರುಗೇಶ್ ನಿರಾಣಿ ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ್ದೇನೆ. ಮೃತಪಟ್ಟವರ ಕುಟುಂಬದಲ್ಲಿ ಯಾರಾದರೂ ನಮ್ಮ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಮನಸ್ಸಿದ್ದರೆ ಅವರ ವಿದ್ಯಾರ್ಹತೆ ಅನುಗುಣವಾಗಿ ಕೆಲಸ ನೀಡುತ್ತೇನೆ’ ಎಂದು ಹೇಳಿದರು.

ಡಿಸ್ಟಿಲರಿ ಸಂಸ್ಕರಣಾ ಘಟಕ ಸ್ಪೋಟಗೊಂಡು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Leave a Reply

Your email address will not be published.