ಮೇಲ್ವರ್ಗದ ಬಡವರಿಗೂ ಶೇ. 10 ಮೀಸಲಾತಿ: ಕೇಂದ್ರ ಸಂಪುಟದ ಮಹತ್ವದ ತೀರ್ಮಾನ


ಹೊಸದಿಲ್ಲಿ: ಮೇಲ್ವರ್ಗದ ಅಭ್ಯರ್ಥಿಗಳಿಗೆ ಶೇ. 10 ರಷ್ಟು ಮೀಸಲು ಸೌಲಭ್ಯ ಕಲ್ಪಿಸುವ ಕುರಿತಂತೆ ಕೇಂದ್ರ ಸಚಿವ ಸಂಪುಟ ಸೋಮವಾರ ಮಹತ್ವದ ನಿರ್ಣಯ ಕೈಗೊಂಡಿದೆ.

ಪ್ರಧಾನಿ ನರೇಂದ್ರ  ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದ್ದು, ಉದ್ಯೋಗ ಮತ್ತು ಶಿಕ್ಷಣದಲ್ಲಿ ಈ ಮೀಸಲಾತಿ ಅನ್ವಯವಾಗಲಿದೆ.

ಮೀಸಲು ಯೋಜನೆ ಜಾರಿ ಸಂಬಂಧ ನಾಳೆ ಲೋಕಸಭೆಯಲ್ಲಿ ವಿಧೇಯಕ ಮಂಡನೆಯಾಗಲಿದೆ.

Leave a Reply

Your email address will not be published.